ಉಡುಪಿ,ಮಾ21(AZM):ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದಿಂದ ಸ್ಪರ್ಧೆಗೆ ಇಳಿದಿದ್ದಾರೆ.
ಲೋಕಸಭಾ ಚುನಾವಣೆಗೆ ರಾಜ್ಯ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ನಡೆದ ಒಪ್ಪಂದದ ಹಿನ್ನಲೆ ಉಡುಪಿ ಚಿಕ್ಕಮಗಳೂರು ಕ್ಷೇತ್ರ ಜೆಡಿಎಸ್ ಪಾಲಾಗಿದೆ. ಆದರೆ ಈ ಕ್ಷೇತ್ರದಲ್ಲಿ ಜೆಡಿಎಸ್ ನಲ್ಲಿ ಸಮರ್ಥ ಅಭ್ಯರ್ಥಿಯ ಕೊರತೆ ಇರುವುದರಿಂದ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ಪ್ರಮೋದ್ ಮಧ್ವರಾಜ್ ಜೆಡಿಎಸ್ನಿಂದ ಸ್ಪರ್ಧಿಸಲಿದ್ದಾರೆ ಎಂದು ಜೆಡಿಎಸ್ ಹಿರಿಯ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಬೋಜೇಗೌಡರು ತಿಳಿಸಿದ್ದಾರೆ.
ಪ್ರಮೋದ್ ಮಧ್ವರಾಜ್ ಅವರು ಜೆಡಿಎಸ್ ಬಿಫಾರ್ಮ್ನೊಂದಿಗೆ ಜೆಡಿಎಸ್ ಚಿಹ್ನೆಯಲ್ಲಿ ಸ್ಪರ್ಧಿಸಲಿದ್ದು, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಅವರು ಪ್ರಮೋದ್ ರಿಗೆ ಪಕ್ಷದ ಬಿಫಾರ್ಮ್ನ್ನು ನೀಡಿದ್ದಾರೆ ಎಂದು ಹೇಳಿದ್ದಾರೆ.
ಇನ್ನು ಪ್ರಮೋದ್ ಮಧ್ವರಾಜ್ ಅವರು, ಕಾಂಗ್ರೆಸ್ ಪಕ್ಷದಲ್ಲೇ ಮುಂದುವರಿಯುವರೇ? ಅಲ್ಲ ಪಕ್ಷ ಬದಲಿಸುವರೇ? ಎನ್ನುವ ಪ್ರಶ್ನೆಗೆ ಅವರು ಪ್ರತಿಕ್ರಯಿಸಿಲ್ಲ.