ಮಂಗಳೂರು, ಮಾ 30 (DaijiworldNews/HR): ನಗರದ ಬೆಂದೂರ್ ವೆಲ್ ಬಳಿ ರಸ್ತೆ ದಾಟುತ್ತಿದ್ದ ವೇಳೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.

ಮೃತರನ್ನು ಐರಿನ್ ಡಿಸೋಜ(55) ಎಂದು ಗುರುತಿಸಲಾಗಿದೆ.
ಸಿಟಿ ಬಸ್ ಬೆಂದೂರ್ ವೆಲ್ ಜಂಕ್ಷನ್ ನಲ್ಲಿ ನಿಲ್ಲಿಸಿ ಪ್ರಯಾಣಿಕರನ್ನು ಇಳಿಸಿದ್ದು, ಈ ವೇಳೆ ಅದೇ ಬಸ್ಸಿನಿಂದ ಇಳಿದು ಬಸ್ಸಿನ ಮುಂಭಾಗದಿಂದ ರಸ್ತೆ ದಾಟುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಇನ್ನು ಬಸ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಬಿದ್ದ ಐರಿನ್ ಅವರ ಮೈಮೇಲೆ ಬಸ್ಸಿನ ಮುಂಭಾಗದ ಚಕ್ರ ಹರಿದಿದ್ದು,ತೀವ್ರ ಗಾಯಗೊಂಡಿದ್ದ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.