ಮಂಗಳೂರು, ಮಾ 22(SM): ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ಕದನ ಕುತೂಹಕ್ಕೆ ಕಾರಣವಾಗುತ್ತಿದೆ. ದಿನಕ್ಕೊಂದರಂತೆ ಟ್ವಿಸ್ಟ್ ಗಳು ಕ್ಷೇತ್ರದಲ್ಲಿ ಕಾಣುತ್ತಿವೆ. ಈಗಾಗಲೇ ನಾಮಪತ್ರ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದ್ದು, ಶುಕ್ರವಾರದಂದು ಮತ್ತೆ ಎರಡು ನಾಮಪತ್ರಗಳು ಸಲ್ಲಿಕೆಯಾಗಿವೆ.
ಉತ್ತಮ ಪ್ರಜಾಕೀಯ ಪಕ್ಷದಿಂದ ವಿಜಯ ಶ್ರೀನಿವಾಸ ಮತ್ತು ಪಕ್ಷೇತರ ಅಭ್ಯರ್ಥಿಯಾಗಿ ದೀಪಕ್ ರಾಜೇಶ್ ಕುವೆಲ್ಲೋ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ಮೂಲಕ ಮಂಗಳೂರು ಕ್ಷೇತ್ರದಿಂದ ಇದುವರೆಗೆ ಮೂವರು ನಾಮಪತ್ರ ಸಲ್ಲಿಸಿದಂತಾಗಿದೆ.
ನಾಮಪತ್ರ ಸಲ್ಲಿಕೆಗೆ ಘೋಷಣೆ ಮಾಡಲಾದ ಮೊದಲ ದಿನದಂದೇ ಲೋಕತಾಂತ್ರಿಕ ಜನತಾ ದಳ ಪಕ್ಷದ ಅಭ್ಯರ್ಥಿಯಾಗಿ ಸುಪ್ರೀತ್ ಪೂಜಾರಿ ನಾಮಪತ್ರ ಸಲ್ಲಿಸಿದ್ದರು. ಬಳಿಕದ ಎರಡು ದಿನಗಳು ನಾಮಪತ್ರ ಸಲ್ಲಿಕೆಯಿಂದ ಬಿಡುವು ಪಡೆದುಕೊಂಡಿದ್ದವು. ಎರಡು ದಿನಗಳಲ್ಲಿ ಯಾವುದೇ ನಾಮಪತ್ರ ಸಲ್ಲಿಕೆಯಾಗಿರಲಿಲ್ಲ. ಆದರೆ ಮಾರ್ಚ್ 22ರ ಶುಕ್ರವಾರದಂದು ಎರಡು ನಾಮಪತ್ರಗಳು ಸಲ್ಲಿಕೆಯಾಗಿವೆ.
ಇನ್ನು ನಾಮಪತ್ರ ಸಲ್ಲಿಕೆಗೆ ನಾಲ್ಕು ದಿನಗಳು ಬಾಕಿಯಿದ್ದು, ಮಾರ್ಚ್ 26ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ.