ಬಂಟ್ವಾಳ,ಮಾ22(AZM): ಉಳಿ ಗ್ರಾಮದ ಪುಲ್ಲೇರಿ ಎಂಬಲ್ಲಿ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿರುವುದಾಗಿ ಆರೋಪಿಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.
ಆರೋಪಿಯನ್ನು ಸತೀಶ ಪೂಜಾರಿ ಎಂದು ಗುರುತಿಸಲಾಗಿದೆ. ಈತ 17ರ ಹರೆಯದ ಅಪ್ರಾಪ್ತ ಬಾಲಕಿ ತನ್ನ ಮನೆಯಲ್ಲಿ ಒಬ್ಬಳೇ ಇದ್ದ ಸಮಯ ನೀರು ಕೇಳುವ ನೆಪದಲ್ಲಿ ಅಕ್ರಮವಾಗಿ ಒಳ ನುಗ್ಗಿದ್ದ ಆರೋಪಿ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಕ್ಸೋ ಕಾಯ್ದೆಯಡಿ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.