ಮಂಗಳೂರು, ಮಾ 22(SM): ಮಾರ್ಚ್ 22ರಿಂದ ಐಪಿಎಲ್ ನ 12ನೇ ಆವೃತಿಯ ಪಂದ್ಯಗಳು ಆರಂಭಗೊಳ್ಳಲಿವೆ. ಈ ಹಿನ್ನೆಲೆ ಐಪಿಎಲ್ ಬೆಟ್ಟಿಂಗ್ ನಲ್ಲಿ ತೊಡಗಿಕೊಳ್ಳದಂತೆ ಮಂಗಳೂರು ನಗರ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಎಚ್ಚರಿಕೆ ನೀಡಿದ್ದಾರೆ.
ಬೆಟ್ಟಿಂಗ್ನಲ್ಲಿ ತೊಡಗಿಕೊಳ್ಳುವವರಿಗೆ ಮುನ್ನೆಚ್ಚರಿಕೆ ನೀಡಿರುವ ಕಮೀಷನರ್, ಟ್ವಿಟ್ಟರ್ ಮೂಲಕ ಬುಕ್ಕಿಗಳಿಗೆ ಎಚ್ಚರಿಕೆ ರವಾನಿಸಿದ್ದಾರೆ. ಅಲ್ಲದೆ, ಟ್ವೀಟ್ ನ್ನು ಶೇರ್ ಮಾಡುವಂತೆಯೂ ಮನವಿ ಮಾಡಿದ್ದಾರೆ.
ಚುನಾವಣೆ ನೀತಿಸಂಹಿತೆ ಜಾರಿಯಲ್ಲಿರುವ ಸಂದರ್ಭದಲ್ಲಿ ಐಪಿಎಲ್ ಬೆಟ್ಟಿಂಗ್ ನಡೆಸುವ ಸಾಧ್ಯತೆ ಹೆಚ್ಚಿರುವುದರಿಂದ ಕಮಿಷನರ್ ಖಡಕ್ ವಾರ್ನಿಂಗ್ ನೀಡಿದ್ದಾರೆ.
ಲೋಕಸಭೆ ಚುನಾವಣೆ ಹಿನ್ನೆಲೆ ಮಂಗಳೂರಿನಲ್ಲಿ ಕಮಿಷನರ್ ಆಗಿದ್ದ ಟಿ.ಆರ್. ಸುರೇಶ್ ಅವರನ್ನು ವರ್ಗಾವಣೆ ಮಾಡಲಾಗಿತ್ತು. ಅವರ ಸ್ಥಾನಕ್ಕೆ ಸಂದೀಪ್ ಪಾಟೀಲ್ ರನ್ನು ನೇಮಕ ಮಾಡಲಾಗಿತ್ತು. ಇದೀಗ ಅವರು ಕಟ್ಟುನಿಟ್ಟಿನ ಕ್ರಮದ ಮೂಲಕ ಈಗಾಗಲೇ ಚುನಾವಣೆಗೆ ಸಿದ್ಧತೆಯನ್ನು ನಡೇಸುತ್ತಿದ್ದಾರೆ.
ಟ್ವಿಟ್ಟರ್ ಮೂಲಕ ಸದಾ ಮಾಹಿತಿ ನೀಡುತ್ತಿದ್ದಾರೆ. ಆ ಮೂಲಕ ಜನರಿಗೆ ಹತ್ತಿರವಾಗುತ್ತಿದ್ದಾರೆ. ಈಗಾಗಲೇ ರೌಡಿ ಪರೇಡ್, ರೌಡಿಗಳ ಗಡೀಪಾರು ನಡೆಸಿ ಚುನಾವಣೆ ಸಂದರ್ಭದಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆಯನ್ನು ವಹಿಸಿಕೊಂಡಿದ್ದಾರೆ.