ಉಪ್ಪಿನಂಗಡಿ, ನ 4: ಮೊಬೈಲ್ ಟವರ್ನ 2 ಜನರೇಟರ್ ಕಳವು ಮಾಡಿದ ಖತರ್ನಾಕ್ ಕಳ್ಳನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.
ಬಂಧನಕ್ಕೆ ಒಳಗಾಗಿರುವ ಆರರೋಪಿಯನ್ನು ಚಿಕ್ಕಮಗಳೂರು ನಿವಾಸಿ ರಾಮು ಕುಮಾರ್ ಎಂದು ಗುರುತಿಸಲಾಗಿದೆ.
ಈತ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು, ಚಿಕ್ಕಮಗಳೂರಿನಲ್ಲಿ ಉಪ್ಪಿನಂಗಡಿ ಪೊಲೀಸರ ತಂಡ ಈತನನ್ನು ಬಂಧಿಸಿದೆ. ಇನ್ನೋರ್ವ ಆರೋಪಿಗಾಗಿ ಶೋಧ ಕಾರ್ಯ ಮುಂದುವರೆದಿದೆ.
ಸೆ.16 ರಂದು ಉಪ್ಪಿನಂಗಡಿ ಬಳಿಯ ಬಜತ್ತೂರು ಗ್ರಾಮದ ಬೆದ್ರೋಡಿಯಲ್ಲಿನ ಮೊಬೈಲ್ ಟವರ್ನಿಂದ ಸುಮಾರು ನಾಲ್ಕು ಲಕ್ಷ ರೂಪಾಯಿ ಮೌಲ್ಯದ ಎರಡು ಜನರೇಟರ್ ಕಳವಾಗಿತ್ತು. ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕ ಗೋಪಾಲ ನಾಯ್ಕ ಅವರ ಮಾರ್ಗದರ್ಶನದಲ್ಲಿ ಉಪ್ಪಿನಂಗಡಿ ಠಾಣಾ ನಿರೀಕ್ಷಕ ನಂದಕುಮಾರ್ ಅವರ ನಿರ್ದೇಶನದಂತೆ ಈ ಪ್ರಕರಣದ ಕುರಿತು ತನಿಖೆ ನಡೆಸುತ್ತಿದ್ದರು. ತನಿಖಾ ತಂಡದಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣಾ ಸಿಬ್ಬಂದಿಗಳಾದ ಶೇಖರ ಗೌಡ, ಸಂಗಯ್ಯ, ಪ್ರವೀಣ್ ರೈ, ಇರ್ಷಾದ್, ಜಗದೀಶ್ ಭಾಗಿಯಾಗಿದ್ದು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.