ಉಡುಪಿ, ಮಾ25(SS): ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಅಭ್ಯರ್ಥಿಯಾದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಇಂದು ನಾಮಪತ್ರ ಸಲ್ಲಿಸಿದ್ದಾರೆ.
ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ - ಜೆಡಿಎಸ್ ಅಭ್ಯರ್ಥಿಗಳೊಂದಿಗೆ ಪ್ರಮೋದ್ ಮಧ್ವರಾಜ್ ಸಭೆ ನಡೆಸಿ, ಬಳಿಕ ಉಡುಪಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಪ್ರಮೋದ್ ಮಧ್ವರಾಜ್ ಶ್ರೀ ಕೃಷ್ಣಮಠ ಸೇರಿದಂತೆ ಉಡುಪಿಯ ಹಲವು ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿದ್ದಾರೆ.
ಈ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಪ್ರಮೋದ್ ಮಧ್ವರಾಜ್, ನಾನು ಬ್ರಹ್ಮಶ್ರೀ ನಾರಯಣ ಗುರುಗಳ ತತ್ವದಲ್ಲಿ ನಂಬಿಕೆ ಇಟ್ಟಿದ್ದೇನೆ. ಈ ಹಿನ್ನೆಲೆಯಲ್ಲಿ ದೇವಾಲಯ, ಚರ್ಚ್ ಹಾಗೂ ಮಸೀದಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದ್ದೇನೆ. ಚುನಾವಣೆಯಲ್ಲಿ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಜೆಡಿಎಸ್ ಅಭ್ಯರ್ಥಿಯಾಗಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವುದಕ್ಕೆ ಖುಷಿ ಇದೆ. ಕೋಮು ಶಕ್ತಿಯ ವಿರುದ್ಧ ನಮ್ಮ ಹೋರಾಟವಿದು ಎಂದು ಹೇಳಿದರು.