ಉಡುಪಿ, ಮಾ26(SS): ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯ ನಾಮಪತ್ರ ಸಲ್ಲಿಕೆ ಕಾರ್ಯಕ್ರಮ ಹಾಗೂ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಭಾಗವಹಿಸಲು ಕೇಂದ್ರದ ಗೌರವಾನ್ವಿತ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಉಡುಪಿಗೆ ಆಗಮಿಸಿದ್ದರು.
ಈ ವೇಳೆ ನಿರ್ಮಲಾ ಸೀತಾರಾಮನ್ ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ತೆರಳಿ ಶ್ರೀ ಕೃಷ್ಣನ ದರ್ಶನ ಪಡೆದರು. ಈ ಸಂದರ್ಭದಲ್ಲಿ ಅವರು ಸಾಮಾನ್ಯ ಭಕ್ತರಂತೆ ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು. ಅಲ್ಲದೆ, ಇವರು ದರ್ಶನ ಪಡೆಯುವ ಸಂದರ್ಭದಲ್ಲಿ ಕನಕನ ಕಿಂಡಿ ಮೂಲಕ ದರ್ಶನ ಪಡೆಯುತ್ತಿದ್ದ ವ್ಯಕ್ತಿಯನ್ನು ಸರಿಸಲು ಪೊಲೀಸರು ಮುಂದಾದರು. ಆದರೆ, ಪೊಲೀಸರನ್ನು ತಡೆದ ರಕ್ಷಣಾ ಸಚಿವೆ, ಸಾಮಾನ್ಯ ಪ್ರಜೆಯಂತೆ ದೇವರ ದರ್ಶನ ಪಡೆದರು.
ಗೌರವಾನ್ವಿತ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಈ ಸರಳತನಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.