ಮಂಗಳೂರು,ಮಾ 27(MSP): ನಗರದ ವೆಲೆನ್ಸಿಯಾದ ಸೂಟರ್ ಪೇಟೆಯಲ್ಲಿ ರೈಲು ಢಿಕ್ಕಿ ಹೊಡೆದು ಮಹಿಳೆಯೋರ್ವರು ಸಾವನ್ನಪ್ಪಿದ ಘಟನೆ ಮಾ.27 ರ ಬುಧವಾರ ನಡೆದಿದೆ. ಮೃತರನ್ನು ಸೂಟರ್ ಪೇಟೆ ನಿವಾಸಿ ಪದ್ಮ (55) ಎಂದು ಗುರುತಿಸಲಾಗಿದೆ.
ರೈಲು ಬರುವುದನ್ನು ಗಮನಿಸದೇ ಇವರು ರೈಲ್ವೆ ಹಳಿ ದಾಟಿದ್ದು ಘಟನೆಗೆ ಕಾರಣ ಎನ್ನಲಾಗಿದೆ. ರೈಲ್ವೆ ಹಳಿ ದಾಟಲು ಸೂಕ್ತ ವ್ಯವಸ್ಥೆಗಳಿಲ್ಲದಿರುವುದೇ ಮಹಿಳೆ ಸಾವಿಗೆ ಕಾರಣ ಎಂದು ಸ್ಥಳೀಯರು ರೈಲ್ವೆ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿ ಭಾರೀ ಸಂಖ್ಯೆಯಲ್ಲಿ ಸಾರ್ವಜನಿಕರು ಜಮಾಯಿಸಿದ್ದು, ಇಲಾಖೆ ವಿರುದ್ಧ ಪ್ರತಿಭಟನೆಗೆ ಮುಂದಾಗಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.