ಬಂಟ್ವಾಳ, ಮಾ27(SS): ಇಲ್ಲಿನ ಜೈನ ಪೇಟೆಯ ಸಮೀಪದ ನೇತ್ರಾವತಿ ಸೇತುವೆ ಕೆಳಗಡೆ ನದಿ ನೀರಿನಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ.
ಸುಮಾರು 65 - 70 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಶವ ಇದಾಗಿದ್ದು, ರಾತ್ರಿ ವೇಳೆ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ನೀರಿನ ಮೇಲೆ ಶವ ತೇಲುವುದನ್ನು ಕಂಡ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ತೆರಳಿದ ಪೊಲೀಸರು ಕೆರೆಯಿಂದ ಮೃತದೇಹವನ್ನು ಹೊರತೆಗೆಸಿದ್ದಾರೆ.
ಬಂಟ್ವಾಳ ನಗರ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಘಟನೆ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.