ಕರ್ನಾಟಕದಲ್ಲಿ ಕಂಬಳ ಪುನಾರಂಭಿಸಲು ರಾಜ್ಯ ಸರಕಾರ ಹೊರಡಿಸಿದ್ದ ಅಧ್ಯಾದೇಶದ ವಿರುದ್ಧ ಪ್ರಾಣಿ ದಯಾ ಸಂಘಟನೆ ಪೇಟಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನ. 6 ರ ಸೋಮವಾರ ಸುಪ್ರೀಂ ಕೋರ್ಟ್ ನಲ್ಲಿ ನಡೆಯಿತು. ವಿಚಾರಣೆ ಕೈಗೆತ್ತಿಕೊಂಡ ನ್ಯಾಯಲಯ ಕರಾವಳಿಯ ಸಾಂಪ್ರದಾಯಿಕ ಕ್ರೀಡೆ ಕಂಬಳಕ್ಕೆ ತಡೆಯಾಜ್ಞೆ ನೀಡಲು ನಿರಾಕರಿಸಿದೆ.ಕಂಬಳಕ್ಕೆ ಅವಕಾಶ ನೀಡುವ ಕರ್ನಾಟಕದ ಕಾಯ್ದೆಗೆ ತಡೆ ಕೋರಿ ಪ್ರಾಣಿ ದಯಾ ಸಂಘಟನೆ ಪೆಟಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ತಡೆ ನೀಡಲು ನಿರಾಕರಿಸಿದೆ. ಈ ಸಂಬಂಧ ಕರ್ನಾಟಕ ಮತ್ತು ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿರುವ ಸುಪ್ರೀಂ ಕೋರ್ಟ್, ವಿಚಾರಣೆಯನ್ನು ನವೆಂಬರ್ 13 ಕ್ಕೆ ನಿಗದಿಪಡಿಸಿದೆ. ಅಲ್ಲದೆ ಮುಂದಿನ ವಿಚಾರಣೆಯ ಸಂದರ್ಭದಲ್ಲಿ ಹಾಜರಿರುವಂತೆ ಅಟಾರ್ನಿ ಜನರಲ್ ಅವರಿಗೆ ಸೂಚಿಸಿದೆ.
ಈ ನಡುವೆ ಕರ್ನಾಟಕ ಹೈಕೋರ್ಟ್ ನಿಷೇಧ ವಿಧಿಸಿದ ಹಲವು ತಿಂಗಳುಗಳ ಬಳಿಕ ಕಂಬಳಕ್ಕೆ ಸಿಕ್ಕಿದ ಜಯವನ್ನು ನವೆಂಬರ್ 11ರಂದು ಮೂಡುಬಿದಿರೆಯಲ್ಲಿ ಕಂಬಳ ಆಯೋಜಿಸುವ ಮೂಲಕ ಸಂಭ್ರಮಿಸಲು ನಿರ್ಧರಿಸಲಾಗಿದೆ.