ಉಡುಪಿ, ಮಾ 30(MSP): ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿದ ಜಿಲ್ಲಾ ಪೊಲೀಸರು, ಜಿಲ್ಲೆಯ ವಿವಿಧ ಠಾಣೆಗಳಲ್ಲಿ ವಾರೆಂಟ್ ಇರುವ ಹೊರ ಜಿಲ್ಲೆಗಳ 27 ಆರೋಪಿಗಳನ್ನು ಬಂಧಿಸಿದ್ದಾರೆ.
ವಾರೆಂಟುಗಳನ್ನು ಪರಿಶೀಲಿಸಿ, ತಲೆಮರೆಸಿಕೊಂಡಿರುವ ಆರೋಪಿಗಳನ್ನು ಪಟ್ಟಿ ಮಾಡಿ ಕಾರ್ಯಾಚರಣೆ ನಡೆಸಲಾಗಿದೆ. ಪತ್ತೆ ಕಾರ್ಯಕ್ಕಾಗಿ 5 ತಂಡಗಳನ್ನು ರಚಿಸಲಾಗಿತ್ತು.
ಮಧ್ಯಪ್ರದೇಶದ ಇಂದೋರ್ನಲ್ಲಿ ಇಬ್ಬರು, ಮಹಾರಾಷ್ಟ್ರದ ಸಾಂಗ್ಲಿಯಿಂದ ಒಬ್ಬ ಮತ್ತು ಕೇರಳದ ಮೂವರು, ಹೊರ ಜಿಲ್ಲೆಗಳಿಂದ 21 ಆರೋಪಿಗಳನ್ನು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಕೇರಳದ ಕಾಸರಗೋಡಿನಲ್ಲಿ ಬಂಧಿಸಲಾಗಿರುವ ಆರೋಪಿ ಅಮೀರ್ ಆಲಿ 26 ವರ್ಷಗಳಿಂದ ತಲೆಮರೆಸಿಕೊಂಡಿದ್ದ. ಬೈಂದೂರು ಠಾಣಾ ವ್ಯಾಪ್ತಿಯಲ್ಲಿ ಕಳವು ಪ್ರಕರಣದಲ್ಲಿ ಈತ ಪ್ರಮುಖ ಆರೋಪಿಯಾಗಿದ್ದ. ಈತನನ್ನು ಮಣಿಪಾಲ ಠಾಣೆಯ ಸಬ್ ಇನ್ಸ್ಪೆಕ್ಟರ್ ಶ್ರೀಧರ ನಂಬಿಯಾರ್ ಅವರ ತಂಡ ಕಾಸರಗೋಡಿನಲ್ಲಿ ಬಂಧಿಸಿ ಕರೆತಂದಿದೆ. ಇದೇ ಪ್ರಕರಣದ ಇನ್ನೊಬ್ಬ ಆರೋಪಿ ಕೆ.ಪಿ.ಯೂಸುಫ್ ಮೃತಪಟ್ಟಿದ್ದಾನೆ.