ಮಂಗಳೂರು, ಮಾ 30(SM): ವಿಜಯಾ ಬ್ಯಾಂಕ್ ಇತಿಹಾಸದ ಪುಟ ಸೇರುತ್ತಿದ್ದು, ಈ ಹಿನ್ನೆಲೆಯಲ್ಲಿ ಏಪ್ರಿಲ್ 1ರಂದು ಕರಾಳ ದಿನ ಆಚರಿಸುತ್ತೇವೆ ಎಂದು ಮಂಗಳೂರಿನಲ್ಲಿ ದ.ಕ. ಜಿಲ್ಲಾ ಕಾಂಗ್ರಸ್ ಅಧ್ಯಕ್ಷ ಹರೀಶ್ ಕುಮಾರ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಾಭದಲ್ಲಿರುವ ವಿಜಯ ಬ್ಯಾಂಕನ್ನು ನಷ್ಟದಲ್ಲಿರುವ ಬರೋಡಾ ಬ್ಯಾಂಕ್ ನೊಂದಿಗೆ ವಿಲೀನಗೊಳಿಸಿದ್ದಕ್ಕೆ ವಿರೋಧ ವ್ಯಕ್ತಪಡಿಸಿದರು. ವಿಜಯ ಬ್ಯಾಂಕನ್ನು ನಶ್ಟದಲ್ಲಿರುವ ಬ್ಯಾಂಕ್ ನೊಂದಿಗೆ ವಿಲೀನಗೊಳಿಸುವ ಅಗತ್ಯವಾದರೂ ಏನಿತ್ತು ಎಂದು ಕೇಂದ್ರ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಜನತೆ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಲ್ಲಿ ವಿಜಯಾ ಬ್ಯಾಂಕ್ ಹೆಸರು ಉಳಿಸುತ್ತೇವೆ ಎಂದರು.
ಇನ್ನು ಬೆಳ್ತಂಗಡಿಯ ಬಿಜೆಪಿ ನಾಯಕ ರಂಜನ್ ಗೌಡ ಕಾಂಗ್ರೆಸ್ ಸೇರ್ಪಡೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಪಕ್ಷದ ನೀತಿ, ಸಿದ್ದಾಂತ ಒಪ್ಪಿಕೊಂಡು ಬಂದರೆ ಸ್ವಾಗತಿಸುತ್ತೇವೆ ಎಂದರು.