ಉಡುಪಿ, ಮಾ 31(SM): ಮಣಿಪಾಲದಲ್ಲಿ 17ರ ಹರೆಯದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಜೈಲು ಪಾಲಾಗಿದ್ದ ಆರೋಪಿಯೋರ್ವ ತಪ್ಪಿಸಿಕೊಂಡಿರುವ ಘಟನೆ ಮಾರ್ಚ್ 31ರ ರವಿವಾರ ನಡೆದಿದೆ.
ಮಣಿಪಾಲದಲ್ಲಿ ನಡೆದ 17 ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಹನುಮಂತಪ್ಪ(30) ಎಂಬ ಆರೋಪಿ ಮಾರ್ಚ್ 29ರ ಶುಕ್ರವಾರದಂದು ಬಂಧಿತನಾಗಿ ಜೈಲು ಸೇರಿದ್ದ.
ಬಳಿಕ ಆತನನ್ನು ರವಿವಾರದಂದು ಮಣಿಪಾಲ ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದರು. ವಿಚಾರಣೆಯ ಬಳಿಕ ನ್ಯಾಯಾಧೀಶರು ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ್ದರು.
ಬಳಿಕ ಆತನನ್ನು ಹೊಯ್ಸಳ ವಾಹನದಲ್ಲಿ ಇಬ್ಬರು ಕಾನ್ಸ್ ಟೇಬಲ್ ಗಳೊಂದಿಗೆ ಕರೆ ತರಲಾಗಿತ್ತು. ಆ ಸಂದರ್ಭದಲ್ಲಿ ಆರೋಪಿ ತಪ್ಪಿಸಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಆದರೆ ಆತ ಯಾವ ಸಂದರ್ಭದಲ್ಲಿ ಪರಾರಿಯಾಗಿದ್ದಾನೆ ಎಂಬುವುದು ಸ್ಪಷ್ಟಗೊಂಡಿಲ್ಲ. ಬದಲಿಗೆ ಆತ ಹಸಿರು ಪಂಚೆ ತೊಟ್ಟಿದ್ದ ಎಂದು ತಿಳಿದುಬಂದಿದೆ.
ಸದ್ಯ ಮಣಿಪಾಲ ಹಾಗೂ ಹಿರಿಯಡ್ಕ ಠಾಣಾ ಪೊಲೀಸರು ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ.