ಉಡುಪಿ,ಏ.ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಹಿನ್ನಲೆ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಮತ್ತು ಉಡುಪಿ ಶಾಸಕ ರಘುಪತಿ ಭಟ್ ಹಾಗೂ ಉಡುಪಿ ಜಿಪಂ ಸದಸ್ಯ ಮಾರಾಳಿ ಪ್ರತಾಪ್ ಹೆಗ್ಡೆ ವಿರುದ್ಧ ಪ್ರಕರಣ ದಾಖಲಾಗಿದೆ.
ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಗೆ ಚುನಾವಣಾ ಅಧಿಕಾರಿ ಮಹೇಶ್ ಕೆ.ಜಿ. ದೂರು ನೀಡಿದ್ದಾರೆ. ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಮತ್ತು ಉಡುಪಿ ಶಾಸಕ ರಘುಪತಿ ಭಟ್ ಹಾಗೂ ಉಡುಪಿ ಜಿಪಂ ಸದಸ್ಯ ಮಾರಾಳಿ ಪ್ರತಾಪ್ ಹೆಗ್ಡೆ ಇವರು ಮಾ.30ರಂದು ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆರೂರು, ಕೆಂಜೂರು, ನೀಲಾವರ, ಉಪ್ಪೂರು ಹಾಗೂ ಹಾವಂಜೆ ಗ್ರಾಮಗಳಲ್ಲಿ ರಾಜಕೀಯ ಪಕ್ಷ ಮತ್ತು ಅಭ್ಯರ್ಥಿ ಪರವಾಗಿ ಪ್ರಚಾರ ಮಾಡಲು ಪ್ರಾಧಿಕಾರದ ಪೂರ್ವಾನುಮತಿ ಪಡೆಯದೆ, ಧ್ವನಿ ವರ್ಧಕಗಳನ್ನು ಬಳಸಿ ಚುನಾವಣಾ ಸಭೆಗಳನ್ನು ನಡೆಸಿದ್ದಾರೆ. ಇದು ಮತದಾರರಲ್ಲಿ ಪ್ರಭಾವ ಬೀರಲಿದ್ದು ಇದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ದೂರಿನಲ್ಲಿ ಹೇಳಲಾಗಿದೆ