ಮಂಗಳೂರು, ಎ03(SS): ನಳಿನ್ ಕುಮಾರ್ ಕಟೀಲ್ ಸುಳ್ಳು ಮಾಹಿತಿ ನೀಡಿ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಮೇಯರ್ ಮಹಾಬಲ ಮಾರ್ಲ ಆರೋಪಿಸಿದ್ದಾರೆ.
ಚುನಾವಣಾ ಪ್ರಚಾರದ ವೇಳೆ ಕಾರ್ಯಕ್ರಮವೊಂದರಲ್ಲಿ, ವಿಜಯ ಬ್ಯಾಂಕ್ ವಿಲೀನಕ್ಕೆ ಮುನ್ನುಡಿ ಬರೆದವರು ಯುಪಿಎ ಸರಕಾರದ ಅವಧಿಯಲ್ಲಿ ಸಚಿವರಾಗಿದ್ದ ಪ್ರಣವ್ ಮುಖರ್ಜಿ, ಚಿದಂಬರಂ ಎಂದು ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ಮಾಜಿ ಮೇಯರ್ ಮಹಾಬಲ ಮಾರ್ಲ, ನಳಿನ್ ಕುಮಾರ್ ಕಟೀಲ್ ಸುಳ್ಳು ಮಾಹಿತಿ ನೀಡಿ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.
ನಳಿನ್ ಕುಮಾರ್ ಕಟೀಲ್ ಸುಳ್ಳು ಮಾಹಿತಿ ನೀಡುತ್ತಿದ್ದಾರೆ. ಮಾತ್ರವಲ್ಲ, ಸುಳ್ಳು ಹೇಳಿ ಜನತೆಯನ್ನು ದಿಕ್ಕು ತಪ್ಪಿಸುವ ಕೆಲಸ ಸಂಸದರಿಂದ ನಡೆಯುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಸದರು ವಿಜಯ ಬ್ಯಾಂಕ್ ಉಳಿಸುವ ಯಾವುದೇ ಕೆಲಸ ಮಾಡಿಲ್ಲ. ಇದೀಗ ಅದನ್ನು ಬಿಟ್ಟು ಇನ್ನೊಬ್ಬರ ಮೇಲೆ ಆರೋಪ ಮಾಡುತ್ತಿದ್ದಾರೆ. ನಗರದ ಬೆಳವಣಿಗೆಗೆ ಸಂಸದರ ಕೊಡುಗೆ ಏನೂ ಇಲ್ಲ ಎಂದು ತಿಳಿಸಿದರು.