ಮಂಗಳೂರು,ಏ04(AZM): ಕಮಿಷನರೇಟ್ ವ್ಯಾಪ್ತಿಯಲ್ಲಿ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ತೊಡಗಿದ್ದ ಮೂವರನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ವಿಶಾಲ್, ಕುಮಾರ್, ಅಶೋಕ್ ಎಂದು ಗುರುತಿಸಲಾಗಿದೆ. ಆರೋಪಿಗಳಿಂದ 26000 ನಗದು ಹಾಗೂ ನಾಲ್ಕು ಮೊಬೈಲ್ ಗಳನ್ನು ವಶಪಡಿಸಲಾಗಿದೆ.
ಮಂಗಳೂರು ನಗರದಲ್ಲಿ ಒಟ್ಟು ಈ ವರೆಗೆ ಮೂರು ಪ್ರಕರಣಗಳು ದಾಖಲಾಗಿದ್ದು ಇದು ನಾಲ್ಕನೇ ಪ್ರಕರಣವಾಗಿದೆ. ಮಂಗಳೂರು ಪೊಲೀಸರು ಕ್ರಿಕೆಟ್ ಬೆಟ್ಟಿಂಗ್ ದಂಧೆ ಮೇಲೆ ಹದ್ದಿನ ಕಣ್ಣಿಟ್ಟ್ಣು ಕಾರ್ಯ ಪ್ರವೃತ್ತರಾಗಿದ್ದು ನಗರದಲ್ಲಿ ಒಟ್ಟು ನಾಲ್ಕು ಪ್ರಕರಣ ಭೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ.