ಪುತ್ತೂರು,ಏ03(AZM):ಆಟವಾಡಲೆಂದು ಟ್ಯಾಂಕ್ ಗೆ ಇಳಿದ ಮೂವರು ಮಕ್ಕಳು ಮೃತಪಟ್ಟಿರುವ ಘಟನೆ ಪಾಣಾಜೆ ಸಮೀಪದ ಉಡ್ಡಂಗಳ ಎಂಬಲ್ಲಿ ನಡೆದಿದೆ.
ಪರೀಕ್ಷೆ ಮುಗಿಸಿ ರಜೆ ಸಿಕ್ಕಿದ ಹಿನ್ನಲೆ ಬೆಟ್ಟಂಪಾಡಿ ಪಂಚಾಯತ್ ನ ನೀರು ಸರಬರಾಜು ಮಾಡುವ ಟ್ಯಾಂಕ್ ಗೆ ಆಟವಾಡಲೆಂದು ಮಕ್ಕಳು ಇಳಿದು ಸಾವಿಗೀಡಾಗಿದ್ದಾರೆ. ಮೃತ ಮಕ್ಕಳನ್ನು ವಿಶ್ಮಿತಾ (13), ಚೈತ್ರಾ (10), ಜಿತೇಶ್ (13) ಎಂದು ಗುರುತಿಸಲಾಗಿದೆ.
ಮೃತಪಟ್ಟ ಮಕ್ಕಳೆಲ್ಲಾ ಬೆಟ್ಟಂಪಾಡಿಯ ಮಿತ್ತಡ್ಕ ಸರಕಾರಿ ಶಾಲೆಯ ವಿದ್ಯಾರ್ಥಿಗಳಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸುದಾಖಲಾಗಿದೆ.