ಮಂಗಳೂರು ನ 8 : ರಾಜ್ಯ ಸರ್ಕಾರದ ಟಿಪ್ಪು ಜಯಂತಿ ಹಾಗೂ ಬಿಜೆಪಿಯ ನವ ಕರ್ನಾಟಕ ಪರಿವರ್ತಾನ ರ್ಯಾಲಿ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಪೊಲೀಸ್ ಬಿಗ್ ಬಂದೋ ಬಸ್ತ್ ಕೈಗೊಳ್ಳಲಾಗಿದೆ.
ಈ ಬಗ್ಗೆ ನ 8 ರ ಬುಧವಾರ ಸುದ್ದಿಗಾರರಿಗೆ ಮಾಹಿತಿ ನೀಡಿದ ಎಡಿಜಿಪಿ ಕಮಲ್ ಪಂಥ್ ನವೆಂಬರ್ 11 ರಂದು ಜಿಲ್ಲೆಯಲ್ಲಿ ಟಿಪ್ಪು ಜಯಂತಿ ಹಾಗೂ ಪರಿವರ್ತನಾ ರ್ಯಾಲಿ ನಡೆಯಲಿದ್ದು ಅಂದು ಯಾವುದೇ ಅಹಿತಕರ ಘಟನೆ ನಡೆಯದಂತೆ ಸೂಕ್ತ ಕ್ರಮ ಕೈಗೊಳ್ಳಲಾಗಿದ್ದು, ಇದಕ್ಕಾಗಿ ನಗರ ಹಾಗೂ ಜಿಲ್ಲಾ ಪೊಲೀಸ್ ಅಲ್ಲದೆ ಹೆಚ್ಚುವರಿಯಾಗಿ 2500 ಪೊಲೀಸರನ್ನು ,13 ಕೆ ಎಸ್ ಆರ್ ಪಿ ತುಕಡಿ , 1 ಆರ್ ಎ ಎಫ್ ನಿಯೋಜಿಸಲಾಗಿದೆ ಎಂದರು.
ರೌಡಿಗಳ ಪಟ್ಟಿಯಲ್ಲಿರುವ ಹಾಗೂ ಸಮಾಜ ಘಾತುಕ ಶಕ್ತಿಗಳನ್ನು ಮೇಲೆ ನಿಗಾ ಇರಿಸಲಾಗಿದ್ದು, ಅಂದು ಕಾನೂನಿಗೆ ವಿರುದ್ದವಾಗಿ ವರ್ತಿಸುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಟಿಪ್ಪು ಜಯಂತಿ ಸರ್ಕಾರಿ ಕಾರ್ಯಕ್ರಮವಾಗಿರುವ ಹಿನ್ನಲೆಯಲ್ಲಿ ಯಾರಿಗೂ ಪ್ರತಿಭಟನೆಗೆ ಅವಕಾಶ ಇಲ್ಲ ಎಂದರು. ಸುದ್ದಿಗೋಷ್ಟಿಯಲ್ಲಿ ಎಸ್ಪಿ ಸುಧೀರ್ ಕುಮಾರ್ ರೆಡ್ಡಿ ಹಾಗೂ ಪೊಲೀಸ್ ಕಮಿಷನರ್ ಟಿ. ಸುರೇಶ್ ಕುಮಾರ್ ಉಪಸ್ಥಿತರಿದ್ದರು.