ಮಂಗಳೂರು, ಎ04(SS): ಭೂಗತ ಲೋಕದಲ್ಲಿ ಸಕ್ರಿಯನಾಗಿ ತೊಡಗಿಕೊಂಡಿರುವ ಪಾತಕಿ ವಿಕ್ಕಿ ಶೆಟ್ಟಿಯ ಸಹಚರ ರೌಡಿ ಶೀಟರ್ ಆಕಾಶ್ ಭವನ್ ಶರಣ್ನನ್ನು ಮಂಗಳೂರು ಪೋಲಿಸರು ಬಂಧಿಸಿದ್ದಾರೆ.
ಆರೋಪಿ ಆಕಾಶ್ ಭವನ್ ಶರಣ್ ವಿರುದ್ಧ ಮಂಗಳೂರಿನ ವಿವಿಧ ಠಾಣೆಗಳಲ್ಲಿ 18ಕ್ಕೂ ಮಿಕ್ಕಿ ಪ್ರಕರಣಗಳಿವೆ.
ಕೊಲೆ, ಸುಲಿಗೆ, ಅತ್ಯಾಚಾರ ಸಹಿತ 18 ಕ್ಕೂ ಅಧಿಕ ಪ್ರಕರಣಗಳಲ್ಲಿ ಭಾಗಿಯಾದ ಆರೋಪ ಶರಣ್ ಮೇಲಿದ್ದು, ಪೊಲೀಸರು ಈ ಹಿಂದೆಯೇ ಈತನನ್ನು ರೌಡಿಶೀಟರ್ ಪಟ್ಟಿಗೆ ಸೇರಿಸಿದ್ದರು. ಅನೇಕ ಪ್ರಕರಣಗಳ ಆರೋಪಿಯಾಗಿರುವ ರೌಡಿ ಶೀಟರ್ ಆಕಾಶ್ ಭವನ್ ಶರಣ್ ಕಳೆದ ಕೆಲ ತಿಂಗಳುಗಳಿಂದ ತಲೆಮರೆಸಿಕೊಂಡಿದ್ದನು.
ಇದೀಗ ಮಂಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿ ರೌಡಿ ಶೀಟರ್ ಆಕಾಶ್ ಭವನ್ ಶರಣ್ನನ್ನು ಬಂಧಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.