ಮಂಗಳೂರು,ಏ07(AZM):ಲೋಕಸಭಾ ಚುನಾವಣೆ ಹಿನ್ನೆಲೆ ದ.ಕ ಜಿಲ್ಲಾ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯನ್ನು ಇಂದು ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಬಿಡುಗಡೆಗೊಳಿಸಲಾಯಿತು.
ಮಾಜಿ ಸಚಿವರಾದ ರಮಾನಾಥ ರೈಯವರು ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈಯವರು ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ದ.ಕ. ಜಿಲ್ಲೆಗೆ ಏನೆಲ್ಲಾ ಕೊಡುಗೆಗಳನ್ನು ನೀಡುತ್ತಾರೆ ಅನ್ನುವುದನ್ನು ಪ್ರಣಾಳಿಕೆಯಲ್ಲಿ ಹೇಳಲಾಗಿದೆ.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ರಮಾನಾಥ ರೈಯವರು ಮಾತನಾಡಿ, ಪ್ರಣಾಳಿಕೆಯಲ್ಲಿ ಯಾವುದೇ ರೀತಿಯ ಸುಳ್ಳು ಭರವಸೆಗಳನ್ನು ನೀಡಿಲ್ಲ.ದ.ಕ. ಜಿಲ್ಲೆಯ ಅಭಿವೃದ್ಧಿಯೇ ನಮ್ಮ ಪ್ರಮುಖ ಉದ್ದೇಶವಾಗಿದೆ ಎಂದರು. ಇನ್ನು ವಿಜಯಬ್ಯಾಂಕನ್ನು ಕರಾವಳಿಯಲ್ಲಿ ಮರುಸ್ಥಾಪಿಸಿ, ಅದರ ಘನತೆಗೆ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.