ಬಂಟ್ವಾಳ, ನ 09: ಸಮಾಜದ ಶೋಷಿತ ವರ್ಗ ಮತ್ತು ಹಿಂದು ಳಿದ ವರ್ಗಗಳಿಗೆ ಉಚಿತ ಕಾನೂನು ನೆರವು ನೀಡಲಾಗುವುದು ಅಲ್ಲದೆ ಸಮಾಜದಲ್ಲಿರುವ ದುಶ್ಚಟಗಳ ಬಗ್ಗೆ ಅರಿವು ಮೂಡಿಸುವುದು, ಹಾಗೂ ಜನರಲ್ಲಿ ಕಾನೂನಿನ ಬಗ್ಗೆ ಅರಿವನ್ನುಂಟುಮಾಡುವುದು , ಕಾನೂನು ಸಾಕ್ಷರತೆ ಉಚಿತ ಕಾನೂನು ನೆರವು ಮತ್ತು ಸಲಹೆಯನ್ನು ಕೊಡುವುದು , ಜನತಾ ನ್ಯಾಯಾಲಯಗಳ ಮೂಲಕ ಪ್ರಕರಣಗಳನ್ನು ಶೀಘ್ರವಾಗಿ ಕಡಿಮೆ ಖರ್ಚಿನಲ್ಲಿ ಇತ್ಯರ್ಥಗೊಳಿಸುವುದು ಇದು ಈ ಕಾರ್ಯಕ್ರಮದ ಉದ್ದೇಶ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಚಂದ್ರಶೇಖರ್ ತಿಳಿಸಿದರು.ಅವರು ತಾಲೂಕು ಕಾನೂನು ಸೇವೆಗಳ ಸಮಿತಿ , ವಕೀಲರ ಸಂಘ ಇದರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಕಾನೂನು ಸೇವಾ ದಿನದ ಅಂಗವಾಗಿ ಮನೆ ಮನೆ ಭೇಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವಕೀಲರ ಸಂಘದ ಅಧ್ಯಕ್ಷ ವೆಂಕಟ್ರಮಣ ಶೆಣೈ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಪ್ರಧಾನ ಸಿವಿಲ್ ನ್ಯಾಯಾಧೀ ಶರಾದ ಪ್ರಕಾಶ್ ಸಿ.ಡಿ. , ಸಹಾಯಕ ಸರಕಾರಿ ವಕೀಲರಾದ ಸತೀಶ್ ಕುಮಾರ್ ಶಿವಗಿರಿ, ಮೈರಾನ್ ಪಾದೆ ಶ್ರೀ ರಾಮ ಭಜನಾ ಮಂದಿರದ ಅಧ್ಯಕ್ಷ ಶಿವಕುಮಾರ್ ಉಪಸ್ಥಿತರಿದ್ದರು.