ವಿಟ್ಲ, ನ 10 : ಸಾರ್ವಜನಿಕವಾಗಿ ಟಿಪ್ಪು ಜಯಂತಿ ಅಚರಣೆ ಮಾಡಬಾರದೆಂದು ಪೊಲೀಸ್ ಆದೇಶ ನೀಡಿದ್ದರೂ ಟಿಪ್ಪು ಆಚರಣೆ ಮಾಡಲು ಮುಂದಾದ ಮೂವರು ಯುವಕರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸುಲೈಮಾನ್, ಅರ್ಷದ್, ಸಿದ್ದಿಕ್ ಬಂಧಿತರು. ಇವರು ವಿಟ್ಲದ ಒಕ್ಕೆತ್ತೂರು ಎಂಬಲ್ಲಿ ಟಿಪ್ಪು ಜಯಂತಿಗೆ ಮುಂದಾಗಿದ್ದು, ಈ ವೇಳೆ ಪೊಲೀಸರು ಆಗಮಿಸಿ ಮೂವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇದರಿಂದ ಆಕ್ರೋಶಗೊಂಡ ತಂಡವೊಂದು ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿತು.. ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿ ತಿಳಿಗೊಳಿಸಿದರು. ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.