ಕೇರಳ, ನ 10: ಕಣ್ಣೂರು ಸಮೀಪದ ಕೂರುಪರಂಬ ಪ್ರದೇಶದಲ್ಲಿ ಆರ್ ಎಸ್ ಎಸ್ ಕಾರ್ಯಕರ್ತನೊಬ್ಬನ ಮನೆಯಲ್ಲಿ ಸ್ಫೋಟ ಸಂಭವಿಸಿದ್ದು, ಮನೆಯ ಬಹುತೇಕ ಭಾಗ ಬೆಂಕಿಗೆ ಆಹುತಿಯಾಗಿರುವ ಘಟನೆ ನಡೆದಿದೆ.
ಆರ್ ಎಸ್ ಎಸ್ ಕಾರ್ಯಕರ್ತನನ್ನು ವಲಯಂಗಡನ್ ರಘು ಎಂದು ಗುರುತಿಸಲಾಗಿದೆ. ಮನೆಯಲ್ಲಿ ಸ್ಫೋಟ ಸಂಭವಿಸಿದ ಕೆಲವೇ ಕ್ಷಣಗಳಲ್ಲಿ ರಘು ಹಾಗೂ ಆತನ ಪುತ್ರ ಮನೆಯಿಂದ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ಆರ್ ಎಸ್ ಎಸ್ ಕಾರ್ಯಕರ್ತನ ಮನೆಯನ್ನು ಪರಿಶೀಲಿಸಿದ ಪೊಲೀಸರಿಗೆ ಮನೆಯ ಕೋಣೆಯಲ್ಲಿ ಸುಮಾರು ಅರ್ಧ ಕೆ.ಜಿಯಷ್ಟು ಗನ್ ಪೌಡರ್ ಸಿಕ್ಕಿದ್ದು, ಮನೆಯಲ್ಲಿ ಬಾಂಬ್ ತಯಾರಿಸುತ್ತಿರುವಾಗ ಈ ಘಟನೆ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಆದರೆ ಈ ಬಗ್ಗೆ ಇನ್ನೂ ಕೂಡ ಖಚಿತ ಮಾಹಿತಿ ಸಿಕ್ಕಿಲ್ಲ.