ಮಂಗಳೂರು, ನ 11: ನಗರದ ಕಂಕನಾಡಿ ರೈಲ್ವೇ ಸ್ಟೇಷನ್ ಸಮೀಪ ಅಪರಿಚಿತ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿದೆ. ಸುಮಾರು 35-40 ವರ್ಷ ವಯಸ್ಸಿನ ಈ ವ್ಯಕ್ತಿಯನ್ನು ಕೊಲೆ ಮಾಡಿ ಬೀಸಾಕಿರಬಹುದೆಂಬ ಶಂಕೆ ವ್ಯಕ್ತವಾಗಿದೆ.
ಕೊಲೆಯಾದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಸಾಕಷ್ಟು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಸ್ಥಳೀಯ ಜನರು ಶವವನ್ನು ನೋಡಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಡಿಸಿಪಿ ಹನುಮಂತರಾಯ ಭೇಟಿ ನೀಡಿದ್ದು ತನಿಖೆ ನಡೆಸುತ್ತಿದ್ದಾರೆ.