ಬಂಟ್ವಾಳ, ನ 11: ಕಾಂಗ್ರೆಸ್ ಮುಕ್ತ ಭಾರತಕ್ಕೆ ಪೂರಕವಾಗಿ ಕರ್ನಾಟಕವೂ ಕಾಂಗ್ರೆಸ್ ಮುಕ್ತ ವಾಗಬೇಕು. ಇದು ಪ್ರಧಾನಿ ನರೇಂದ್ರ ಮೋದಿಯವರ ಆಶಯ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಯಡಿಯೂರಪ್ಪ ಹೇಳಿದರು.
ಅವರು ಬಿ.ಸಿ ರೋಡಿನಲ್ಲಿ ನಡೆದ ಪರಿವರ್ತನಾ ಯಾತ್ರೆಯಲ್ಲಿ ಮಾತನಾಡಿ, ಕರ್ನಾಟಕವನ್ನು ಕಾಂಗ್ರೆಸ್ ಮುಕ್ತವಾಗಿಸಲು ಯಡಿಯೂರಪ್ಪ ಒಬ್ಬನಿಂದಲೇ ಸಾಧ್ಯವಿಲ್ಲ. ಪ್ರತಿಯೊಬ್ಬ ಬಿಜೆಪಿ ಕಾರ್ಯಕರ್ತನೂ ಈ ಕುರಿತು ಸಂಕಲ್ಪ ಮಾಡಬೇಕು ಎಂದು ತಿಳಿಸಿದರು.
ಸಂಸದೆ ಶೋಭಾ ಕರಂದ್ಲಾಜೆ ಮಾತನಾಡಿ, ಜಿಲ್ಲೆಯಲ್ಲಿ ಈ ಬಾರಿ ಬದಲಾವಣೆ ಅನಿವಾರ್ಯವಾಗಿದೆ. ಜಿಲ್ಲೆಯಲ್ಲಿ ಅಕ್ರಮ ಮರಳು ಮಾಫಿಯಾ ಹಾಗೂ ಮರದ ದಂಧೆ ಸಚಿವ ರೈ ಬಂಟರಿಂದ ನಡೆಯುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕಾದರೆ ಮುಂದಿನ ಚುನಾವಣೆಯಲ್ಲಿ ಬಂಟ್ವಾಳದಲ್ಲಿ ಬಿಜೆಪಿ ಬರಬೇಕು. ರಾಜ್ಯದಲ್ಲಿ ಯಡಿಯೂರಪ್ಪ ಸರ್ಕಾರ ಅಧಿಕಾರಕ್ಕೆ ಬರಬೇಕು ಎಂದರು.
ಹಿಂದಿನ ನಿಷೇಧಿತ ಸಿಮಿ ಸಂಘಟನೆಯ ಇನ್ನೊಂದು ರೂಪವಾಗಿರುವ ಪಿಎಫ್ ಐ ಯನ್ನು ಸಿದ್ಧರಾಮಯ್ಯ ಸರ್ಕಾರ ಬೆಂಬಲಿಸುತ್ತಿದೆ. ಮುಸಲ್ಮಾನರ ಓಲೈಕೆಯೊಂದೇ ಕಾಂಗ್ರೆಸ್ ನ ಸಿದ್ಧಾಂತ ಎಂದವರು ಆಪಾದಿಸಿದರು.
ಈ ವೇಳೆ ಕೇಂದ್ರ ಸಚಿವ ಅನಂತ ಕುಮಾರ್ ಹೆಗಡೆ, ಡಿ.ವಿ.ಸದಾನಂದ ಗೌಡ, ಸಂಸದೆ ಶೋಭಾಕರಂದ್ಲಾಜೆ, ನಳಿನ್ ಕುಮಾರ್ ಕಟೀಲು, ಸಂಸದ ಶ್ರೀರಾಮುಲು, ಬಿಜೆಪಿ ಮುಖಂಡರಾದ ಮಾಳವಿಕಾ, ಆಯನೂರು ಮಂಜುನಾಥ್, ತೇಜಸ್ವಿನಿ ರಮೇಶ್, ಭಾರತಿ ಶೆಟ್ಟಿ, ಗಣೇಶ್ ಕಾರ್ಣಿಕ್, ಮೋನಪ್ಪ ಭಂಡಾರಿ, ಶೈಲಜಾ ಭಟ್, ರಾಜೇಶ್ ನಾಯ್ಕ್, ಅಶೋಕ್ ಕುಮಾರ್ ರೈ, ಪದ್ಮನಾಭ ಕೊಟ್ಟಾರಿ, ರುಕ್ಮಯ ಪೂಜಾರಿ, ದಿನೇಶ್ ಭಂಡಾರಿ, ಜಿ.ಆನಂದ, ಮೋನಪ್ಪ ದೇವಸ್ಯ, ಆರೆಸ್ಸೆಸ್ ಮುಖಂಡ ಪ್ರಭಾಕರ ಭಟ್ ಕಲ್ಲಡ್ಕ, ರವಿಕುಮಾರ್, ಎಸ್.ಅಂಗಾರ, ಕಿಶೋರ್ ಕುಮಾರ್, ವಿಕ್ರಮಾದಿತ್ಯ, ಸತೀಶ್ ಕುಂಪಲ, ಜಿ.ಪಂ.ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ದೇವದಾಸ್ ಶೆಟ್ಟಿ, ನಾಗರಾಜ ಶೆಟ್ಟಿ, ಉದಯುಮಾರ್, ರವಿಚಂದ್ರ, ಕಿರಣ್ ಕುಮಾರ್, ಕಮಲಾಕ್ಷಿ ಪೂಜಾರಿ, ತುಂಗಪ್ಪ ಬಂಗೇರ, ರವೀಂದ್ರ ಕಂಬಳಿ, ಬುಲೆಟ್ ಪ್ರಕಾಶ್, ಉಮಾನಾಥ ಕೋಟ್ಯಾನ್, ಸತ್ಯಜಿತ್ ಸುರತ್ಕಲ್ ಮೊದಲಾದವರು ಉಪಸ್ಥಿತರಿದ್ದರು.