ಮಂಗಳೂರು, ಏ 11 (MSP): ಲೋಕಸಭಾ ಚುನಾವಣೆ ಸಂಬಂಧ ಬಿಜೆಪಿಯ ಪ್ರಚಾರ ಸಭೆಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಅವರು ಎ.13ರಂದು ಮಧ್ಯಾಹ್ನ 3.30ಕ್ಕೆ ಮಂಗಳೂರಿಗೆ ಆಗಮಿಸಲಿದ್ದಾರೆ. ಈ ಹಿನ್ನಲೆಯಲ್ಲಿ ಕೇಂದ್ರ ಮೈದಾನದಲ್ಲಿ ದ.ಕ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯಿಂದ ವ್ಯಾಪಕ ಸಿದ್ದತೆ ನಡೆಸಲಾಗುತ್ತಿದೆ.
ಪ್ರಧಾನಿ ಭದ್ರತೆಯನ್ನು ಉಸ್ತುವಾರಿ ವಹಿಸಿರುವ ಎಸ್ ಪಿ ಜಿ ಉನ್ನತ ಅಧಿಕಾರಿಗಳು ಬುಧವಾರ ಬೆಳಗ್ಗೆ ಮೈದಾನದಲ್ಲಿ ಸಿದ್ಧತೆ ಪರಿಶೀಲಿಸಿದರು. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಕೇಂದ್ರ ಮೈದಾನಕ್ಕೆ ಆಗಮಿಸುವ ರಸ್ತೆಯನ್ನು ಪೊಲೀಸ್ ಅಧಿಕಾರಿಗಳ ಜತೆ ವೀಕ್ಷಿಸಿದರು.
ಭದ್ರತೆಗೆ 1,472 ಪೊಲೀಸರ ವ್ಯವಸ್ಥೆ ಮಾಡಲಾಗಿದೆ. ಇದರಲ್ಲಿ 5 ಎಸ್ಪಿ/ ಡಿಸಿಪಿ, 10 ಡಿವೈಎಸ್ಪಿ/ ಎಸಿಪಿ, 36 ಪಿಐಗಳು, 67 ಪಿಎಸ್ಐ, 147 ಎಎಸ್ಐ, 1207 ಎಚ್ಸಿ/ ಪಿಸಿ ಸೇರಿದಂತೆ ಒಟ್ಟು 1,472 ಪೊಲೀಸ್ ಅಧಿಕಾರಿಗಳು ಮತ್ತು ಸಿಬಂದಿಯನ್ನು ನಿಯೋಜಿಸಲಾಗಿದೆ. 92 ಎಚ್ಐ, 5 ಕೆಎಸ್ಆರ್ಪಿ ತುಕಡಿ, 19 ಸಿಎಆರ್ ತುಕಡಿ ಮತ್ತು 2 ಸಿಆರ್ಪಿಎಫ್ ತುಕಡಿಗಳ ಅಧಿಕಾರಿ ಮತ್ತು ಸಿಬಂದಿ, 4 ಎಎಸ್ಸಿ ತಂಡ, 1 ಬಿಡಿಎಸ್ ತಂಡ, 30 ಡಿಎಫ್ಎಂಡಿ/ 30 ಎಚ್ಎಚ್ಎಂಡಿಯನ್ನು ಬಂದೋಬಸ್ತು ಕರ್ತವ್ಯದಲ್ಲಿ ಒಟ್ಟು 34 ಸೆಕ್ಟರ್ ಮೊಬೈಲ್ಗಳು ಹಾಗೂ 144 ಸೂಕ್ಷ್ಮ ಪ್ರದೇಶಗಳಲ್ಲಿ ಪಿಕೆಟಿಂಗ್ ಪಾಯಿಂಟ್ಗಳು ಕಾರ್ಯ ನಿರ್ವಹಿಸಲಿವೆ. ಸಿಸಿ ಕೆಮರಾ ಅಳವಡಿಸಲಾಗಿದೆ. ಹೊಟೇಲ್/ ಲಾಡ್ಜ್ ಗಳನ್ನು ತಪಾಸಣೆ ಮಾಡಲಾಗುತ್ತಿದೆ. ವಿಮಾನ, ರೈಲು ನಿಲ್ದಾಣಗಳಲ್ಲಿ ನಿಗಾ ಇಡಲಾಗಿದೆ.