ಮಂಗಳೂರು, ಎ11(SS): ಪ್ರತಿಪಕ್ಷದವರಿಗೆ ದಿನಕ್ಕೊಮ್ಮೆಯಾದರೂ ಮೋದಿ ಹೆಸರು ಹೇಳದಿದ್ದರೆ ನಿದ್ದೆಯೇ ಬರುವುದಿಲ್ಲ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರತಿಪಕ್ಷದವರಿಗೆ ನಮ್ಮ ಮೋದಿಜಿಯೇ ಬೇಕು. ದಿನಕ್ಕೊಮ್ಮೆಯಾದರೂ ಮೋದಿ ಹೆಸರು ಹೇಳದಿದ್ದರೆ ಅವರಿಗೆ ನಿದ್ದೆಯೇ ಬರಲ್ಲ ಎಂದು ವ್ಯಂಗ್ಯವಾಡಿದ್ದಾರೆ.
ಇದೇ ವೇಳೆ ಚುನಾವಣಾ ಪ್ರಚಾರದ ಕುರಿತು ಮಾತನಾಡಿದ ಅವರು, ಪಕ್ಷದ ಕಾರ್ಯಕರ್ತರು ಮತ್ತು ನಾಯಕರ ನಡುವಿನ ಕೊಂಡಿಯಾಗಿ ಪಂಚಾಯತ್ ಸದಸ್ಯರು ಕೆಲಸ ಮಾಡಬೇಕು. ಜನರ ನಾಡಿಮಿಡಿತವನ್ನು ಚೆನ್ನಾಗಿ ತಿಳಿಯಲು ಪಂಚಾಯತ್ ಸದಸ್ಯರಿಗೆ ಸಾಧ್ಯ. ಆದ್ದರಿಂದ ಪಕ್ಷದ ಪರವಾಗಿ ಪರಿಣಾಮಕಾರಿಯಾಗಿ ಪ್ರಚಾರ ಮಾಡಬೇಕು ಎಂದು ಕಾರ್ಯಕರ್ತರಿಗೆ ಸಲಹೆ ನೀಡಿದರು.
ಸದ್ಯ ಕರಾವಳಿಯಲ್ಲಿ ಲೋಕಸಭಾ ಚುನಾವಣೆಯ ಬಿಸಿ ಕಾವೇರುತ್ತಿದ್ದು, ಪ್ರಚಾರದ ಭರಾಟೆಯೂ ಜೋರಿದೆ. ಮತ್ತೂಂದೆಡೆ ರಾಜಕೀಯ ಪಕ್ಷಗಳ ಮುಖಂಡರಿಂದ ಧಾರ್ಮಿಕ ಕೇಂದ್ರಗಳ ಭೇಟಿಯೂ ಭರ್ಜರಿಯಾಗಿಯೇ ನಡೆಯುತ್ತಿದೆ.ಲೋಕಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಅಭ್ಯರ್ಥಿಗಳು ಹಾಗೂ ಬೆಂಬಲಿಗರು ತಮ್ಮ ಎದುರಾಳಿಗಳನ್ನು ಸೋಲಿಸಲು ಹಲವು ತಂತ್ರಗಳನ್ನು ಉಪಯೋಗಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ, ಘಟಾನುಘಟಿ ನಾಯಕರು ಕರಾವಳಿಗೆ ಬಂದು ತಮ್ಮ ಅಭ್ಯರ್ಥಿಗಳ ಪರ ಪ್ರಚಾರದಲ್ಲಿ ತೊಡಗಿದ್ದಾರೆ.