ಬಂಟ್ವಾಳ, ನ 11: ರಮಾನಾಥ ರೈ ಹಿಂದೂಗಳ ಮೇಲೆ ಒಡೆದು ಆಳುವ ನೀತಿಯನ್ನು ಅನುಸರಿಸುತ್ತಿದ್ದಾರೆ. ರೈ ಮುಸ್ಲಿಮರ ಓಲೈಕೆ ಮಾಡಿದ ಪರಿಣಾಮ ನಾವು ಇವತ್ತು ಶರತ್ ಮಡಿವಾಳ ಅವರನ್ನು ಕಳೆದುಕೊಳ್ಳುವಂತಾಗಿದೆ ಎಂದು ಶೋಭಾ ಕರಂದ್ಲಾಜೆ ಕಿಡಿಕಾರಿದರು.
ಅವರು ಬಂಟ್ವಾಳದಲ್ಲಿ ನಡೆದ ನವ ಕರ್ನಾಟಕ ಪರಿವರ್ತನಾ ಯಾತ್ರೆಯಲ್ಲಿ ಮಾತನಾಡಿದರು. ಕಲ್ಲಡ್ಕ ಪ್ರಭಾಕರ್ ಭಟ್ ಯಾವುದೇ ತಪ್ಪು ಮಾಡಿಲ್ಲ. ಆದರೆ ರಮಾನಾಥ ರೈ ಪ್ರಭಾಕರ್ ಭಟ್ ಅವರನ್ನು ಬಂಧಿಸುವ ಷಡ್ಯಂತ್ರ ನಡೆಸುತ್ತಿದ್ದಾರೆ. ಒಂದು ವೇಳೆ ನಿಮಗೆ ನಿಜವಾಗಿಯೂ ತಾಕತ್ತು ಇದ್ದರೆ ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನುಬಂಧಿಸಿ ನೋಡಿ ಎಂದು ಸವಾಲ್ ಹಾಕಿದ್ದಾರೆ.