ಮಂಗಳೂರು,ಏ13(AZM): ಮಂಗಳೂರು ಹೊರವಲಯದ ಕುತ್ತಾರಿನಲ್ಲಿ ಏ.13ರಂದು ನಡೆದ ಗುಂಪು ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಏ.13ರಂದು ಮಂಗಳೂರಿನಲ್ಲಿ ನಡೆದ ಪ್ರಧಾನಿ ಮೋದಿ ರ್ಯಾಲಿಗೆ ಆಗಮಿಸಿ ಹಿಂದಿರುಗುತ್ತಿದ ಬಸ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕರ ಮಧ್ಯೆ ವಾಗ್ವಾದ ನಡೆದು ಗುಂಪು ಘರ್ಷಣೆಯುಂಟಾಗಿ ಸ್ಥಳದಲ್ಲಿ ಉದ್ರೀಕ್ತ ವಾತಾವರಣ ನಿರ್ಮಾಣವಾಗಿತ್ತು. ಇದೇ ಬಸ್ಸಿನಲ್ಲಿದ್ದ ಮಹಿಳೆಯರ ಮೇಲೆ ದೌರ್ಜನ್ಯವೆಸಗಿ ಬಸ್ಸಿಗೆ ಕಲ್ಲು ತೂರಾಟ ನಡೆಸಲಾಗಿತ್ತು ಎಂದು ಆರೋಪಿಸಲಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ 7 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಈ ಕುರಿತು ಮತ್ತಷ್ಟು ಪರಿಶೀಲನೆ ನಡೆಸಿ ಮುಂದಿನ ಕ್ರಮಕೈಗೊಳ್ಳಲಾಗುತ್ತದೆ.