ಮಂಗಳೂರು, ನ 13: ಕರ್ನಾಟಕ ಖಾಸಗಿ ವೈದ್ಯಕೀಯ ಕಾಯಿದೆ ತಿದ್ದುಪಡಿ ತರಲು ಬೆಳಗಾವಿ ಅಧಿವೇಶನದಲ್ಲಿ ಮಂಡಿಸಲು ರಾಜ್ಯ ಸರಕಾರ ನಿರ್ಧರಿಸಿದ್ದು ಇದರ ವಿರುದ್ದ ಸಿಡಿದೆದ್ದಿರುವ ಖಾಸಗಿ ವೈದ್ಯಕೀಯ ಸಂಘವು ನ 13ರ ಸೋಮವಾರ ಹೊರರೋಗಿಗಳ ವೈದ್ಯಕೀಯ ಸೇವೆ ಸ್ಥಗಿತಗೊಳಿಸಿ ಮತ್ತೆ ಪ್ರತಿಭಟನೆಯ ಹಾದಿ ತುಳಿದಿದ್ದಾರೆ. ಮುಷ್ಕರದ ಹಿನ್ನಲೆಯಲ್ಲಿ ನಗರದಲ್ಲೂ ಖಾಸಗಿ ಆಸ್ಪತ್ರೆಗಳಲ್ಲಿ ಹೊರರೋಗಿಗಳ ವೈದ್ಯಕೀಯ ಸೇವೆಯನ್ನು ಸ್ಥಗಿತಗೊಳಿಸಿರುವುದರಿಂದ ರೋಗಿಗಳು ಪರದಾಡುವ ಸ್ಥಿತಿ ಸಾಮಾನ್ಯವಾಗಿತ್ತು. ಇನ್ನೊಂದೆಡೆ ಸರ್ಕಾರಿ ವೆನ್ಲಾಕ್ ಆಸ್ಪತ್ರೆಗೆ ಹೊರರೋಗಿಗಳ ದಂಡೇ ಹರಿದುಬಂತು.