ಮಂಗಳೂರು, ಎ16(SS): ಮಂಗಳೂರಿನ ಹೊರವಲಯದ ಅಡ್ಯಾರ್ ಬಳಿ ನಡೆದ ಭೀಕರ ಅಪಘಾತದಲ್ಲಿ ಮಹಿಳೆಯೊಬ್ಬರು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ವರದಿಯಾಗಿದೆ.
ಅಡ್ಯಾರ್ ವಳಚ್ಚಿಲ್ ನಿವಾಸಿ ಮೀನಾಕ್ಷಿ (55) ಮೃತಪಟ್ಟವರು.
ಅಡ್ಯಾರ್ ದೇವಸ್ಥಾನದಲ್ಲಿ ನಡೆಯುತ್ತಿದ್ದ ಜಾತ್ರೆಗೆ ಬಂದಿದ್ದ ಈ ಮೂವರು ಮಹಿಳೆಯರು, ಜಾತ್ರೆ ಮುಗಿಸಿ ಬೆಳಗ್ಗಿನ ಜಾವ ತಮ್ಮ ಸಂಬಂಧಿಕರ ಮನೆಗೆ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಮಂಗಳೂರಿನಿಂದ ಬಂಟ್ವಾಳಕ್ಕೆ ಹೋಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಮಹಿಳೆಯರಿಗೆ ಢಿಕ್ಕಿಯಾಗಿದೆ. ಪರಿಣಾಮ, ಮೀನಾಕ್ಷಿ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಗೀತಾ (50), ಗೌತಮಿ (22) ಗಾಯಗೊಂಡವರು ಎನ್ನಲಾಗಿದೆ.
ಘಟನೆ ಕುರಿತು ಕಂಕನಾಡಿ ನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.