ಉಡುಪಿ, ಎ16(SS): ಬಿಜೆಪಿಯವರು ಕ್ಷೇತ್ರದ ಅಭ್ಯರ್ಥಿಯ ಪರವಾಗಿ ಮತ ಕೇಳುತ್ತಿಲ್ಲ. ಬದಲಾಗಿ, ಮೋದಿಯನ್ನು ತೋರಿಸಿ ಮತ ಕೇಳುತ್ತಿದ್ದಾರೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ| ಜಯಮಾಲಾ ಲೇವಡಿ ಮಾಡಿದರು.
ಚುನಾವಣಾ ಪ್ರಚಾರದ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಕ್ಷೇತ್ರದ ಅಭ್ಯರ್ಥಿಯ ಪರವಾಗಿ ಮತ ಕೇಳುತ್ತಿಲ್ಲ. ಮೋದಿಯನ್ನು ತೋರಿಸಿ ಮತ ಕೇಳುತ್ತಿದ್ದಾರೆ. ಬಿಜೆಪಿ ಪಕ್ಷದ ಅಭ್ಯರ್ಥಿ ಜನತೆಯ ಆಶೋತ್ತರಗಳಿಗೆ ಸ್ಪಂದಿಸುತ್ತಿದ್ದರೆ ಅವರಿಗೆ ಈ ಪರಿಸ್ಥಿತಿ ಎದುರಾಗುತ್ತಿತ್ತೆ ಎಂದು ಪ್ರಶ್ನಿಸಿದರು.
ಪ್ರಮೋದ್ ಮಧ್ವರಾಜ್ ಅವರು ಶಾಸಕ, ಸಚಿವರಾಗಿದ್ದ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯ ಮಾಡಿದ್ದಾರೆ. ಜನತೆಯ ಆಶೋತ್ತರಗಳಿಗೆ ಸದಾ ಸ್ಪಂದಿಸುವ ನಾಯಕರಾಗಿರುವ ಅವರಿಗೆ ಅಭಿವೃದ್ಧಿಯ ದೃಷ್ಟಿಕೋನವಿದೆ. ಹೀಗಾಗಿ ತಮ್ಮ ಕ್ಷೇತ್ರದ ಜನರ ನಡುವೆ ಇದ್ದು ಅವರ ಹಾಗೂ ಊರಿನ ಅಭಿವೃದ್ಧಿಯ ಕೆಲಸ ಮಾಡುವಂತಹ ಸಂಸದರನ್ನು ಆಯ್ಕೆ ಮಾಡಬೇಕಾಗಿದೆ. ಈ ನಿಟ್ಟಿನಲ್ಲಿ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಕೂಟದ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಅವರನ್ನು ಗೆಲ್ಲಿಸಬೇಕಾಗಿದೆ ಎಂದು ಹೇಳಿದರು.