ಉಡುಪಿ, ಎ16(SS): ದ್ವಿತೀಯ ಪಿಯು ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು ಹೆಬ್ರಿ ಪೊಲೀಸ್ ಠಾಣೆ ವ್ಯಾಪ್ತಿಯ ಮುದ್ದೂರು ನಾಲ್ಕೂರಿನಲ್ಲಿ ವಿದ್ಯಾರ್ಥಿನಿಯೋರ್ವಳು ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ವರದಿಯಾಗಿದೆ.
ಹೆಬ್ರಿಯ ನಡುಮನೆ ಗ್ರಾಮದ ನಿವಾಸಿ ಪ್ರಜ್ಞಾ ಶೆಟ್ಟಿ (18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.
ಸುದ್ದಿ ತಿಳಿಯುತ್ತಿದ್ದಂತೆ ಹೆಬ್ರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಹೆಬ್ರಿ ಠಾಣೆಯಲ್ಲಿ ಯುಡಿಆರ್(ಅಸಹಜ ಸಾವು) ದಾಖಲಾಗಿದೆ.
ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಫೇಲಾದರೇ ಆತ್ಮಹತ್ಯೆ ದಾರಿ ಹಿಡಿಯಬಾರದೆಂಬ ಕಾರಣದಿಂದ ಎಷ್ಟೇ ಜಾಗೃತಿ ಮೂಡಿಸಿದರೂ ಸಹ ಸಡಿಲ ಮನಸಿನಿಂದ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗುವುದು ದುರಾದೃಷ್ಟಕರ ಸಂಗತಿ.