ಬಂಟ್ವಾಳ, ಎ18(Daijiworld News/SS): ಎಲ್ಲೆಡೆ ಕಾಂಗ್ರೆಸ್ ಪರವಾಗಿ ವಾತಾವರಣ ಇದ್ದು, ರಾಹುಲ್ ಗಾಂಧಿ ಪ್ರಧಾನಮಂತ್ರಿಯಾಗಿ ಬರಬೇಕು ಎಂಬುದು ನಮ್ಮಿಚ್ಛೆ ಎಂದು ಕೇಂದ್ರ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಹೇಳಿದ್ದಾರೆ.
ಬಂಟ್ವಾಳದ ಭಂಡಾರಿಬೆಟ್ಟುವಿನ ಎಸ್.ವಿ.ಎಸ್. ಪ್ರಾಥಮಿಕ ಶಾಲಾ ಮತಗಟ್ಟೆಯಲ್ಲಿ ಮತ ಚಲಾಯಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ರಾಹುಲ್ ಗಾಂಧಿ ಪ್ರಧಾನಿಯಾಗಬಹುದೇ, ಅಥವಾ ಮೋದಿ ಮತ್ತೆ ಬರಬಹುದೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ರಾಹುಲ್ ಬರಬೇಕು ಎಂಬುದು ನಮ್ಮಿಚ್ಛೆ ಎಂದು ತಿಳಿಸಿದ್ದಾರೆ.
ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಪೂರಕವಾದ ವಾತಾವರಣವಿದೆ. ಎಲ್ಲರೂ ಮತದಾನವನ್ನು ಮಾಡಿದರೆ ದೇಶ ಪ್ರಬಲವಾಗುತ್ತದೆ ಎಂದು ಕಿವಿಮಾತು ಹೇಳಿದ್ದಾರೆ.
ಮಾತ್ರವಲ್ಲ ಮತದಾನ ಮಾಡುವ ಮೂಲಕ ಮತದಾರ ಪ್ರಭುಗಳು ದೇಶವನ್ನು ಸದೃಢಗೊಳಿಸಬೇಕು ಎಂದು ಕರೆ ನೀಡಿದರು.