ಮಂಗಳೂರು, ಎ18(Daijiworld News/SS): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗ್ಗಿನಿಂದಲೇ ಬಿರುಸಿನ ಮತದಾನ ನಡೆದಿದೆ. ಬೆಳಗ್ಗೆ 7 ಗಂಟೆಯಿಂದಲೇ ಹೆಚ್ಚಿನ ಮತಗಟ್ಟೆಗಳಲ್ಲಿ ಉದ್ದದ ಸರತಿ ಸಾಲು ಕಂಡು ಬಂದಿದ್ದು. ಬೆಳಗ್ಗೆ 11 ಗಂಟೆ ವೇಳೆಗೆ ಶೇ.32.3ರಷ್ಟು ಮತದಾನ ನಡೆದಿದೆ.
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಮಿಥುನ್ ರೈ ಬಲ್ಮಠದಲ್ಲಿ ತಮ್ಮ ಹಕ್ಕು ಚಲಾಯಿಸಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ. ಜಿಲ್ಲೆಯ ಸಮಗ್ರ ಅಭಿವೃದ್ಧಿ ಹಾಗೂ ಸಾಮರಸ್ಯದ ಪರಂಪರೆಯ ಉಳಿವಿಗೆ ಜನ ಬದಲಾವಣೆ ತರುತ್ತಾರೆ ಸಂಪೂರ್ಣ ವಿಶ್ವಾಸ ಇದೆ ಎಂದು ಹೇಳಿದ್ದಾರೆ.
ಕೇಸರಿ ಶಾಲು ವಿಚಾರದಲ್ಲಿ ನಡೆಯುತ್ತಿರುವ ಅಪಪ್ರಚಾರದ ಕುರಿತು ಪ್ರತಿಕ್ರಿಯಿಸಿರುವ ಅವರು, ಕೇಸರಿ ಎಂಬುದು ತ್ಯಾಗ, ಸೌಹಾರ್ದತೆಯ ಸಂಕೇತ. ದುರದೃಷ್ಟವೆಂದರೆ ಕೆಲ ದಿನಗಳಿಂದ ಕೇಸರಿ ಅಂದರೆ ಭೀತಿಯನ್ನು ಹುಟ್ಟಿಸುವ ಕೆಲಸ ನಡೆಯುತ್ತಿದೆ. ಈ ತಪ್ಪು ಅಭಿಪ್ರಾಯ ನಿವಾರಣೆಗೆ ಕೇಸರಿ ಶಾಲು ನಿರಂತರ ಬಳಸುತ್ತಿದ್ದೇನೆ ಎಂದು ಸಮರ್ಥನೆ ನೀಡಿದ್ದಾರೆ.
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಹಳ ಚುರುಕಿನಿಂದಲೇ ಮತದಾನ ನಡೆಯುತ್ತಿದೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ.