ಬಂಟ್ವಾಳ,ಏ 18(Daijiworld News/MSP): ನಮ್ಮದು ಪ್ರಜಾಸತ್ತಾತ್ಮಕ ದೇಶ. ಪ್ರಜೆಗಳ ಮತವನ್ನು ಸ್ವೀಕರಿಸಿ, ಅದಕ್ಕೆ ಪೂರಕವಾಗಿ ಸರಕಾರ ನಡೆಸಬೇಕೆಂಬುದೇ ಪ್ರಜಾತಂತ್ರದ ಆಶಯ, ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಮತದಾನದ ಪಾತ್ರ ಅತ್ಯಂತ ಮಹತ್ತರವಾದುದು. ಜನತಂತ್ರದ ಮುಖ್ಯ ಅಂಗವೇ ಚುನಾವಣೆ. ನಾವು ತೀರ್ಮಾನಿಸಿ ಕೊಡುವ ಅಧಿಕಾರ. ಪ್ರಜೆಗಳಿಂದ ಆಯ್ಕೆಯಾದ ಸರ್ಕಾರ ಜನರ ಆಶೋತ್ತರಗಳಂತೆಯೇ ನಡೆಯಬೇಕೆಂಬುದು ಸಂವಿಧಾನದ ನಿಯಮ. ಹೀಗಾಗದಿದ್ದಾಗ ಜನವಿರೋಧಿ ಸರ್ಕಾರವನ್ನು ಮತದಾನದ ಮೂಲಕವೇ ಕಿತ್ತೆಸೆಯಲೂಬಹುದು. ಹೀಗೆ ಮತದಾನವು ಪ್ರಜೆಗಳಿಗೆ ಸರಕಾರವನ್ನು ಸ್ಥಾಪಿಸುವ ಮತ್ತು ಅಧಿಕಾರದಿಂದ ಕೆಳಗಿಳಿಸುವ ಹಕ್ಕನ್ನು ನೀಡಿದೆ. ಇದನ್ನೇ ‘ಜನತಾಧಿಕಾರ’ಎನ್ನುವುದು.
ಜನತಾಧಿಕಾರ ಚಲಾಯಿಸುವ ಹಕ್ಕೇ ಪ್ರಜಾಪ್ರಭುತ್ವದ ದೊಡ್ಡ ಹಬ್ಬವಾಗಿರುತ್ತದೆ.ಇಲ್ಲಿ ಶ್ರೀಮಂತ, ಬಡವ , ರಾಜಕಾರಣಿ, ಜನ ಸಾಮಾನ್ಯ, ಸ್ತೀ ಪುರುಷ ಎನ್ನುವ ಬೇಧವಿಲ್ಲ 'ಎಲ್ಲರೂ ಸಮಾನರು'. ಬಂಟ್ವಾಳ ತಾಲೂಕಿನಲ್ಲೂ ಹಲವೆಡೆ ಸಾಧು ಸಂತರು ಸ್ವಾಮೀಜಿಗಳು ಮತದಾನದಲ್ಲಿ ಪಾಲ್ಗೊಂಡು ಮತಚಲಾಯಿಸಿದರು.
ಒಡಿಯೂರುಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀಗುರುದೇವಾನಂದ ಸ್ವಾಮೀಜಿಯವರ ಕರೋಪಾಡಿ ಗ್ರಾಮದ ಮಿತ್ತನಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತ ಚಲಾಯಿಸಿದರು.
ಒಡಿಯೂರುಶ್ರೀ ಗುರುದೇವದತ್ತ ಸಂಸ್ಥಾನದ ಸಾಧ್ವಿ ಶ್ರೀಮಾತಾನಂದಮಯಿ ಕರೋಪಾಡಿ ಗ್ರಾಮದ ಮಿತ್ತನಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತದಾನ ಮಾಡಿದರು
ಮಾಣಿಲ ಶ್ರೀಧಾಮ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನದಾಸಪರಮಹಂಸ ಸ್ವಾಮೀಜಿ ಮಾಣಿಲ ಗ್ರಾಮದ ಮುರುವ ಸರಕಾರಿ ಪ್ರೌಢಶಾಲೆಯ ೮೮ನೇ ಮತಗಟ್ಟೆಯಲ್ಲಿ ಮತ ಹಕ್ಕು ಚಲಾಯಿಸಿದರು
ಕನ್ಯಾನ ಕಣಿಯೂರು ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಶ್ರೀ ಮಹಾಬಲ ಸ್ವಾಮೀಜಿಯವರ ಕಣಿಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತದಾನ ಮಾಡಿದರು.