ಮುರುಡೇಶ್ವರ ನ 15 : ಕೇರಳದಲ್ಲಿ ಸುಮಾರು ನೂರಕ್ಕೂ ಅಧಿಕ ಮಂದಿ ಐಸಿಸ್ ಭಯೋತ್ಪಾದಕ ಸಂಘಟನೆಯನ್ನು ಸೇರಿದ್ದು ಇದರ ಪರಿಣಾಮ ಕರಾವಳಿ ಭಾಗದಲ್ಲಿ ಕಂಡು ಬಂದಿದೆ. ಬಿಜೆಪಿ ಅಧಿಕಾರ ವಹಿಸಿಕೊಂಡ ಮರುದಿನವೇ ಕರಾವಳಿಯಲ್ಲಿ ಭಯೋತ್ಪಾದನೆಯನ್ನು ಮಟ್ಟಹಾಕುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹೇಳಿದ್ದಾರೆ. ಮುರುಡೇಶ್ವರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪಿ.ಎಫ್.ಐ, ಎಸ್.ಡಿ.ಪಿ.ಐ ಸಂಘಟನೆ ಸಕ್ರೀಯವಾಗಿದ್ದರೆ, ಇದಕ್ಕೆ ಸಿದ್ದರಾಮಯ್ಯನವರೇ ಹೊಣೆಯಾಗಿದ್ದಾರೆ ಅಂತ ಆರೋಪಿಸಿದರು.ರಾಜ್ಯದಲ್ಲಿ ಸುಮಾರು 42 ಸಾವಿರ ಖಾಸಗಿ ವೈದ್ಯರು ಮುಷ್ಕರ ನಡೆಸುತ್ತಿದ್ದಾರೆ. ತಕ್ಷಣ ವೈದ್ಯರ ಜತೆ ಮಾತುಕತೆ ನಡೆಸಿ ಬಗೆಹರಿಸದಿದ್ದಲ್ಲಿ ರಾಜ್ಯದ ಜನತೆ ಸಂಕಷ್ಟಕ್ಕೆ ಸಿಲುಕಲಿದ್ದಾರೆ . ಕಳೆದ ನಾಲ್ಕೂವರೆ ವರ್ಷದಿಂದ ಸರಕಾರಿ ಆಸ್ಪತ್ರೆಗಳನ್ನು ಅಭಿವೃದ್ಧಿ ಮಾಡಲು ಆಸಕ್ತಿಯನ್ನೇ ತೋರಿಸಿಲ್ಲ. ವೈದ್ಯರ ನೇಮಕ ಮಾಡಿಲ್ಲ, ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದರು.