ಮಂಗಳೂರು,ಏ 22 (Daijiworld News/MSP): ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿಸಿಕೊಂಡಿದ್ದವರಿಗೆ ಬಿಸಿ ಮುಟ್ಟಿಸಿದ್ದ ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ್ ಮೀಟರ್ ಬಡ್ಡಿ ದಂಧೆ ನಡೆಸುವವರ ಮೇಲೂ ಕಣ್ಣಿಟ್ಟಿದ್ದಾರೆ.
ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಅನ್ ಲೈನ್ ಹಾಗೂ ಆಫ್ ಲೈನ್ ನಲ್ಲಿ ಕ್ರಿಕೆಟ್ ಬೆಟ್ಟಿಂಗ್ ದಂಧೆ ಅವ್ಯಾಹತವಾಗಿ ನಡೆಯುತ್ತಿದ್ದವರನ್ನು ಜಾಲಾಡಿ ಬಂಧಿಸಿ ಕರಾವಳಿಯಲ್ಲಿನ ಬೆಟ್ಟಿಂಗ್ ದಂಧೆಯ ಮುಖವನ್ನು ಬಯಲು ಮಾಡಿದ್ದ ಪೊಲೀಸ್ ಇಲಾಖೆ ಇದೀಗ ಮೀಟರ್ ಬಡ್ಡಿದಂಧೆಕೋರರ ಹೆಡೆಮುರಿಕಟ್ಟಲು ತಯಾರಾಗಿದ್ದಾರೆ
ಈ ಬಗ್ಗೆ ಟ್ವೀಟ್ ಮಾಡಿರುವ ನಗರ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ " ಮೀಟರ್ ಬಡ್ಡಿ ದಂಧೆ ಕಾನೂನು ಬಾಹಿರವಾಗಿದ್ದು, ಇಂತಹ ದಂಧೆ ನಡೆಸುವವರ ವಿರುದ್ದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಹಾಗೂ ಮೀಟರ್ ಬಡ್ಡಿ ದಂಧೆ ನಡೆಸುವವರ ಮಾಹಿತಿ ಇದ್ದರೆ ಪೊಲೀಸರಿಗೆ ಮಾಹಿತಿ ನೀಡಿ " ಎಂದು ಸಂದೀಪ್ ಪಾಟೀಲ್ ಸಾರ್ವಜನಿಕರಲ್ಲಿ ವಿನಂತಿಸಿದ್ದಾರೆ.
ಹೀಗಾಗಿ ಮುಂದಿನ ದಿನಗಳಲ್ಲಿ ಪೊಲೀಸ್ ಇಲಾಖೆ, ಸದ್ದಿಲ್ಲದೆ ನಡೆಯುತ್ತಿದ್ದ ಮೀಟರ್ ಬಡ್ಡಿ ದಂಧೆಗೆ ಕಡಿವಾಣ ಹಾಕುವುದು ಖಚಿತವಾಗಿದೆ.