ಖಾಸಗಿ ಆಸ್ಪತ್ರೆಗಳ ವೈದ್ಯರ ಮತ್ತು ರಾಜ್ಯ ಸರ್ಕಾರದ ನಡುವಿನ ತಿಕ್ಕಾಟ ಮುಂದುವರಿದಿದ್ದು,ಗುರುವಾರ ಬೆಳಗ್ಗಿನಿಂದಲೇ ಆರು ಸಾವಿರ ಖಾಸಗಿ ಆಸ್ಪತ್ರೆಗಳ ಒಪಿಡಿ ಬಂದ್ ಆಗಲಿದೆ ಎಂದು ಭಾರತೀಯ ವೈದ್ಯಕೀಯ ಸಂಘ ತಿಳಿಸಿದೆ.ಇಂದು ಬೆಳಗ್ಗೆಯಿಂದಲೇ ಖಾಸಗಿ ಆಸ್ಪತ್ರೆಯ ಹೊರರೋಗಿಗಳ ವಿಭಾಗ ಬಂದ್ ಆಗಲಿದ್ದು, ಎಮರ್ಜೆನ್ಸಿ ಚಿಕಿತ್ಸೆಗಳು ಎಂದಿನಂತೆ ಮುಂದುವರಿಯಲಿದೆ. ಖಾಸಗಿ ವೈದ್ಯಕೀಯ ನಿಯಂತ್ರಣ ತಿದ್ದುಪಡಿ ಮಸೂದೆ ವಿರೋಧಿಸಿ ಬೆಳಗಾವಿಯಲ್ಲಿ ವೈದ್ಯರುಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ. ವೈದ್ಯರ ಮುಷ್ಕರದಿಂದಾಗಿ ರಾಜ್ಯದಲ್ಲಿ ಸೂಕ್ತ ಚಿಕಿತ್ಸೆ ಲಭಿಸದೆ ಸಾವನ್ನಪ್ಪಿದವರ ಸಂಖ್ಯೆ 14ಕ್ಕೇರಿದೆ. ಇನ್ನು ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರದ ಹಿನ್ನೆಲೆಯಲ್ಲಿ ರಾಜ್ಯದಲ್ಲಿರುವ ಸರ್ಕಾರಿ ಆಸ್ಪತ್ರೆಯ ವೈದ್ಯರ ಹಾಗೂ ವೈದ್ಯಕೀಯ ಸಿಬ್ಬಂದಿಗಳ ರಜೆಯನ್ನು ರದ್ದು ಪಡಿಸಲಾಗಿದೆ ಎಂದು ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ.