ಉಡುಪಿ, ಎ24(Daijiworld News/SS): ಈಸ್ಟರ್ ಹಬ್ಬದ ದಿನ ಶ್ರೀಲಂಕಾದಲ್ಲಿ ನಡೆದ ಸರಣಿ ಬಾಂಬ್ ಬ್ಲ್ಯಾಸ್ಟ್ ಪ್ರಕರಣ ಅತ್ಯಂತ ಮೃಗೀಯ ಘಟನೆ.ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
300 ಕ್ಕೂ ಹೆಚ್ಚು ಜನರ ಸಾವು ಇಡೀ ಪ್ರಪಂಚಕ್ಕೆ ನೋವು ತಂದಿದೆ. ಭಾರತದ, ರಾಜ್ಯದ ಹಲವರ ಸಾವಾಗಿದೆ. ನೊಂದ ಕುಟುಂಬಗಳಿಗೆ ನನ್ನ ಸಂತಾಪವಿದೆ. ನೋವು ಭರಿಸುವ ಶಕ್ತಿ ಭಗವಂತ ನೀಡಲಿ. ನನ್ನ ಪಕ್ಷದ ಐದು ಜನ ನಾಯಕರು ಮೃತಪಟ್ಟಿದ್ದಾರೆ. ಅವರು ಪಕ್ಷದ ಆಧಾರ ಸ್ತಂಭಗಳಾಗಿದ್ದರು. ಅವರ ಸಾವು ಪಕ್ಷಕ್ಕೆ- ಅವರ ಕುಟುಂಬಕ್ಕೆ ಆಘಾತ ತಂದಿದೆ ಎಂದು ಹೇಳಿದರು.
ಕನಸಿನಲ್ಲೂ ನಾನು ಇಂಥದ್ದು ನಡೆಯುತ್ತದೆ ಎಂದು ಊಹಿಸಿರಲಿಲ್ಲ. ನನ್ನ ಜೊತೆ ಬಹಳ ಆತ್ಮೀಯರಾಗಿದ್ದರು. ಹನುಮಂತರಾಯಪ್ಪ, ರಂಗಣ್ಣ, ಶಿವಣ್ಣ, ಲಕ್ಷ್ಮೀನಾರಾಯಣ, ರಮೇಶ್ ಆತ್ಮೀಯರಾಗಿದ್ದರು.ನೆಲಮಂಗಲದಲ್ಲಿ ನಾಯಕರ ಸಾವಿನಿಂದ ಶೇ. 50 ಶಕ್ತಿ ಕುಸಿತವಾಗಿದೆ. ಪ್ರಾಮಾಣಿಕ, ಸಾಮಾಜಿಕ ಸೇವೆ ಮಾಡುವವರನ್ನು ಕಳೆದುಕೊಂಡಿದ್ದೇವೆ. ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ಕೊಡಲಾಗಿದ್ದು ಲಂಕಾ ಸಚಿವಾಲಯ ಜೊತೆ ನಿರಂತರ ಸಂಪರ್ಕದಲ್ಲಿದ್ದೇವೆ 7 ಪಾರ್ಥಿವ ಶರೀರ ಗುರುತು ಹಿಡಿಯಲಾಗಿದೆ ಎಂದು ತಿಳಿಸಿದರು.
ಅಲ್ಲಿನವರ ಜೊತೆ ನಿರಂತರ ಸಂಪರ್ಕದಲ್ಲಿದ್ದೇವೆ. ಆಗಾಗ ಕರೆ ಮಾಡಿ ಮಾತನಾಡುತ್ತಿದ್ದೇನೆ. ಮರಣೋತ್ತರ ಪ್ರಕ್ರಿಯೆ ಶೀಘ್ರ ಮುಗಿಸಲು ಮನವಿ ಮಾಡಲಾಗಿದೆ. ಕೃಷ್ಣಪ್ಪ, ಶ್ರೀನಿವಾಸ ಮೂರ್ತಿಗೆ ಜವಾಬ್ದಾರಿ ನೀಡಲಾಗಿದ್ದು ಖಾಸಗಿ ಏರ್ ಕಾರ್ ಕಾರ್ಗೋಗೆ ವ್ಯವಸ್ಥೆ ಮಾಡಲಾಗಿದೆ. ಶೀಘ್ರ ಮೃತದೇಹ ಕರ್ನಾಟಕಕ್ಕೆ ಬರುತ್ತದೆ ಎಂದು ತಿಳಿಸಿದರು.