ಬೆಂಗಳೂರು,ಏ 24 (Daijiworld News/MSP): ಪೋಸ್ಟ್ ಕಾರ್ಡ್ ಡಾಟ್ ಕಾಂ ಮಾಲೀಕ ವಿಕ್ರಮ್ ಹೆಗ್ಡೆಯ ಅವರನ್ನು ಸಿಐಡಿ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರವಾಗಿ ಗೃಹ ಸಚಿವ ಎಂ.ಬಿ.ಪಾಟೀಲ್ ಅವರ ನಕಲಿ ಪತ್ರ ವೈರಲ್ ಮಾಡಿದ್ದ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ಗೃಹ ಸಚಿವ ಎಂ.ಬಿ.ಪಾಟೀಲ್ ಅವರು ಕಾಂಗ್ರೆಸ್ ನಾಯಕಿ, ಯುಪಿಎ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದಾರೆ ಎಂಬ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿದ್ದ ಎಂ.ಬಿ.ಪಾಟೀಲ್ ಪತ್ರ ಬರೆದಿರುವುದನ್ನು ನಿರಾಕರಿಸಿ ನನ್ನ ವಿರುದ್ದ ಷಡ್ಯಂತ್ರ ರೂಪಿಸಿದ್ದಾರೆ ಎಂದು ವಿಜಯಪುರದ ಆದರ್ಶನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಬಳಿಕ ಈ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಸಿಐಡಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ತೀವ್ರ ಬಲಪಂಥೀಯ ವಿಚಾರಧಾರೆಗಳನ್ನು ಹೊಂದಿದ್ದ ಮಹೇಶ್ ಹೆಗ್ಡೆ ಬಂಧನವಾಗುತ್ತಿದ್ದಂತೆ , ಟೀಂ ಮೋದಿಯ ಸ್ಥಾಪಕ ಚಕ್ರವರ್ತಿ ಸೂಲಿಬೆಲೆ, ಸಂಸದೆ ಶೋಭಾ ಕರಂದ್ಲಾಜೆ ಬಂಧನವನ್ನು ಟ್ವೀಟ್ ಮಾಡಿ ಖಂಡಿಸಿದ್ದಾರೆ
ಪೋಸ್ಟ್ ಕಾರ್ಡ್ ಆನ್ ಲೈನ್ ನ್ಯೂಸ್ ಪೋರ್ಟಲ್ ನಲ್ಲಿ ಪ್ರಚೋದನಕಾರಿ ಪ್ರಕರಣದಡಿಯಲ್ಲಿ ಆರೋಪಿ ಮಹೇಶ್ ವಿಕ್ರಂ ಹೆಗಡೆಯನ್ನು ಕಳೆದ 2018 ರ ಏಪ್ರಿಲ್ ತಿಂಗಳಲ್ಲಿನಲ್ಲಿ ಮೂರು ದಿನಗಳ ಕಾಲ ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದರು.