ನ 16: ರಾಜ್ಯ ಸರ್ಕಾರ ಮತ್ತು ಪ್ರತಿಭಟಿಸುತ್ತಿರುವ ಖಾಸಗಿ ವೈದ್ಯರುಗಳಿಗೆ ಛೀಮಾರಿ ಹಾಕಿರುವ ಹೈಕೋರ್ಟ್ ತಕ್ಷಣ ಸಮಸ್ಯೆ ಬಗೆಹರಿಸಬೇಕು ಎಂದು ಸೂಚನೆ ನೀಡಿ, ಮಧ್ಯಾಹ್ನ 2.30ರೊಳಗೆ ಸಮಸ್ಯೆ ಬಗೆಹರಿಸುವಂತೆ ನಿರ್ದೇಶನ ನೀಡಿದೆ.ಖಾಸಗಿ ಆಸ್ಪತ್ರೆಗಳ ವೈದ್ಯರ ಮತ್ತು ರಾಜ್ಯ ಸರ್ಕಾರದ ನಡುವಿನ ತಿಕ್ಕಾಟ ಮದ್ಯೆಯೇ ಗುರುವಾರ ಬೆಳಗ್ಗಿನಿಂದಲೇ ಆರು ಸಾವಿರ ಖಾಸಗಿ ಆಸ್ಪತ್ರೆಗಳ ಒಪಿಡಿ ಬಂದ್ ಆಗಲಿದೆ ಎಂದು ಭಾರತೀಯ ವೈದ್ಯಕೀಯ ಸಂಘ ಎಚ್ಚರಿಸಿತ್ತು. ಆದರೆ ಇಬ್ಬರ ಜಗಳದಿಂದ ಅಗತ್ಯ ಚಿಕಿತ್ಸೆ ದೊರೆಯದೇ ಸಾವನಪ್ಪಿವ ರೋಗಿಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿತ್ತು. ವಕೀಲ ಎನ್.ಪಿ.ಅಮೃತೇಶ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಚ್.ಜಿ.ರಮೇಶ್, ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರ ವಿಭಾಗೀಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ.ಗುರುವಾರ ಮಧ್ಯಾಹ್ನ 2.30ರೊಳಗೆ ಸಮಸ್ಯೆ ಬಗೆಹರಿಸುವಂತೆ ಸೂಚನೆ ನೀಡಿದೆ. ವೈದ್ಯರು ಮತ್ತು ಸರ್ಕಾರದ ಹಠ ಮುಂದುವರೆದರೆ ನ್ಯಾಯಾಲಯವೇ ಮುಂದಿನ ಆದೇಶ ಹೊರಡಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.