ಮಂಗಳೂರು, ಮಾ 09 (DaijiworldNews/ AK):ಸರ್ಕಾರದ ಗ್ಯಾರಂಟಿ ಸಮಾವೇಶಕ್ಕೆ ಮಾ.9ರಶನಿವಾರ ಸಂಜೆ ಉಲ್ಲಾಳದ ಕಲ್ಲಾಪ್ಪುವಿನಲ್ಲಿ ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ವಿಧಾನ ಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್, ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್, ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್, ಮಂಜುನಾಥ್ ಭಂಡಾರಿ, ಮೂಡಾ ಅಧ್ಯಕ್ಷರಾದ ಸದಾಶಿವ ಉಲ್ಲಾಳ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿ.ಪಂ. ಸಿಇಒ ಡಾ. ಆನಂದ್ ಅವರು ಭಾಗವಹಿಸಿ ಗ್ಯಾರಂಟಿ ಯೋಜನೆಗೆ ಚಾಲನೆ ನೀಡಿದರು.
ಎಡಿಸಿ ಸಂತೋಷ್ ಕುಮಾರ್, ಸಹಾಯಕ ಆಯುಕ್ತ ಹರ್ಷವರ್ಧನ್ ಸೇರಿದಂತೆ ಹಲವು ಗಣ್ಯರು ವೇದಿಕೆಯಲ್ಲಿದ್ದರು.