ಉಡುಪಿ, ಮೇ 1 (Daijiworld News/MSP): ಇಲ್ಲಿನ ಕಟಪಾಡಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಭೀಕರ ಅಪಘಾತ ಸಂಭವಿಸಿದೆ. ಲಾರಿಯ ಹಿಂಬದಿಯಿಂದ ಗ್ಯಾಸ್ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಗಂಭೀರ ಗಾಯಗೊಂಡಿದ್ದಾನೆ. ಏ.30ರ ತಡರಾತ್ರಿ ಈ ಘಟನೆ ಸಂಭವಿಸಿದ್ದು ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತು.
ಢಿಕ್ಕಿ ಹೊಡೆದ ರಭಸಕ್ಕೆ ಚಾಲಕ ಪವಾಡಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದರೂ, ಗಂಭೀರ ಗಾಯಗೊಂಡಿದ್ದಾನೆ. ಚಾಲಕನ ಸೀಟಿನಲ್ಲಿ ಸಿಲುಕಿಕೊಂಡ ಗಾಯಾಳು ಚಾಲಕನನ್ನು ಹೊರತೆಗೆಯಲು ಸಾಕಷ್ಟು ಪರದಾಡಬೇಕಾಯಿತು.ಕಾಪು ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು ,ಪೊಲೀಸರು ಮತ್ತು ಸ್ಥಳೀಯರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.