ಬೆಂಗಳೂರು,ಮೇ 7(Daijiworld News/MSP): ರಾಜ್ಯದ ಕರಾವಳಿಯ ಹವಮಾನದಲ್ಲಿ ಪ್ರಮುಖ ಬದಲಾವಣೆಯಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳಲ್ಲಿ ಗುಡುಗು ಸಹಿತ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಹವಾಮಾನ ಇಲಾಖೆಯೂ ಕರಾವಳಿ, ದ.ಒಳನಾಡಿನಲ್ಲಿ 2-3 ದಿನ ಗಾಳಿ ಸಹಿತ ಮಳೆಯಾಗಲಿದೆ. ಸಿಡಿಲಿನ ಅಬ್ಬರವೂ ಇರುವ ಸಾಧ್ಯತೆ ಇದೆ ತಿಳಿಸಿದೆ.
ದಕ್ಷಿಣ ಒಳನಾಡಿನಲ್ಲಿ ಸಾಧಾರಣದಿಂದ ಉತ್ತಮ ಮಳೆಯಾಗಲಿದೆ. ಕರಾವಳಿಯ ಕೆಲವು ಪ್ರದೇಶಗಳಲ್ಲಿ ಬುಧವಾರ ಸಾಧಾರಣ ಮಳೆ ಸುರಿಯುವ ನಿರೀಕ್ಷೆ ಇದೆ. ದಕ್ಷಿಣ ಒಳನಾಡಿನಲ್ಲಿ ಗಾಳಿಯ ವೇಗವೂ ಹೆಚ್ಚಾಗಿರುತ್ತದೆ. ಇಲ್ಲಿ ಗಂಟೆಗೆ 40ರಿಂದ 50 ಕೆ.ಮೀ. ವೇಗದಲ್ಲಿಗಾಳಿ ಬೀಸುವ ಸಾಧ್ಯತೆ ಇದ್ದರೆ. ಕರಾವಳಿಯಲ್ಲಿಗಂಟೆಗೆ 30 ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಂಭವ ಇದೆ. ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ.