ಪುತ್ತೂರು, ಮೇ09(Daijiworld News/SS): ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಮನೆಯೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಪುತ್ತೂರು ತಾಲೂಕಿನ ಪಡ್ನೂರು ಗ್ರಾಮದ ಕೊಡಂಜೆ ನಿವಾಸಿ ಕೃಷ್ಣಪ್ಪ ಪೂಜಾರಿ (68) ಆತ್ಮಹತ್ಯೆ ಮಾಡಿಕೊಂಡವರು.
ಕೃಷ್ಣಪ್ಪ ಪೂಜಾರಿ ಕಳೆದ 10 ವರ್ಷಗಳಿಂದ ಮಂಡಿನೋವು ಸಮಸ್ಯೆ, 2 ವರ್ಷದಿಂದ ಮೂಲವ್ಯಾಧಿ ಸಮಸ್ಯೆ ಮತ್ತು ಹೊಟ್ಟೆನೋವು ಕಾಯಿಲೆಯಿಂದ ಬಳಲುತ್ತಿದ್ದರು. ಈ ಎಲ್ಲಾ ಕಾಯಿಲೆಗಳಿಗೆ ಚಿಕಿತ್ಸೆ ಪಡೆದಿದ್ದರೂ ಗುಣಮುಖವಾಗದ ಹಿನ್ನಲೆಯಲ್ಲಿ ನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಪದೇ ಪದೇ ಕಾಡುತ್ತಿದ್ದ ಕಾಯಿಲೆಗಳಿಂದ ಜಿಗುಪ್ಸೆಗೊಂಡು ಮನೆಯಲ್ಲಿ ಯಾರೂ ಇಲ್ಲದ ವೇಳೆ ಅಡುಗೆ ಕೋಣೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.