ಉಡುಪಿ, ಮೇ.10(Daijiworld News/SS): ಬೇಸಿಗೆ ತಾಪಮಾನ ತೀವ್ರಗತಿಯಲ್ಲಿ ಏರುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ನೀರಿನ ಸಮಸ್ಯೆ ತೀವ್ರಗೊಳ್ಳುತ್ತಿದೆ. ಜನರು ಕುಡಿಯುವ ನೀರಿಗಾಗಿ ಪ್ರತಿದಿನ ಪರದಾಡುವಂತಾಗಿದೆ. ಉಡುಪಿ ನಗರಕ್ಕೆ ನೀರು ಒದಗಿಸುವ ಸ್ವರ್ಣ ನದಿಯ ಒಡಲು ಬರಿದಾಗುವ ಹಂತಕ್ಕೆ ತಲುಪಿದೆ. ಈ ಹಿನ್ನೆಲೆಯಲ್ಲಿ, ನಗರಸಭೆಗೆ ನೀರು ಪೂರೈಕೆ ಮಾಡುವ ಬಜೆ ಅಣೆಕಟ್ಟಿಗೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸಚಿವರು ಬಜೆ ಅಣೆಕಟ್ಟಿನಿಂದ ನಗರಕ್ಕೆ ನೀರು ಪೂರೈಕೆ ಮಾಡುವ ಸ್ಥಳಗಳ ಪರಿಶೀಲನೆ ನಡೆಸಿ, ಡ್ರೆಡ್ಜಿಂಗ್ ನಡೆಯುವ ಭಂಡಾರಿಬೆಟ್ಟು ಹಾಗೂ ಪುತ್ತಿಗೆ ಸೇತುವೆ ಪ್ರದೇಶಗಳಿಗೂ ತೆರಳಿ ನದಿಯಲ್ಲಿರುವ ನೀರಿನ ಮಟ್ಟನ್ನು ವೀಕ್ಷಿಸಿದರು.
ನಗರ ಮಾತ್ರವಲ್ಲದೆ ನೀರಿನ ಸಮಸ್ಯೆ ಗ್ರಾಮಾಂತರ ಪ್ರದೇಶದಲ್ಲಿಯೂ ಕಂಡು ಬಂದಿರುವುದರಿಂದ ಇದಕ್ಕೆ ಪರ್ಯಾಯ ವ್ಯವಸ್ಥೆಯನ್ನು ಕೂಡಲೇ ಮಾಡುವಂತೆ ಸಚಿವೆ ಡಾ.ಜಯಮಾಲ ಅಧಿಕಾರಿಗಳಿಗೆ ಸೂಚಿಸಿದ್ದಾರೆ.