ಬಂಟ್ವಾಳ,ಮೇ 11(DaijiworldNews/AZM): ರಿಕ್ಷಾಕ್ಕೆ ಬೈಕ್ ಡಿಕ್ಕಿ ಹೊಡೆದು ರಿಕ್ಷಾ ಪಲ್ಟಿಯಾದ ಘಟನೆ ಬಿಸಿರೋಡಿನ ಕೆ.ಎಸ್.ಆರ್.ಟಿ.ಸಿ. ಮುಂಭಾಗ ದ ಪ್ಲೈ ಒವರ್ ನಲ್ಲಿ ಇಂದು ಮಧ್ಯಾಹ್ನ ನಡೆದಿದ್ದು.ಪೊಲೀಸರು ವಾಹನ ತಪಾಸಣೆ ನಡೆಸುವುದರಿಂದ ಅಪಘಾತ ನಡೆದಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಸಿರೋಡ್ ಕಡೆಯಿಂದ ಕೈಕಂಬ ಕಡೆಗೆ ಹೋಗುತ್ತಿದ್ದ ರಿಕ್ಷಾಕ್ಕೆ ಹಿಂಬಂದಿಯಿಂದ ಅತಿಯಾದ ವೇಗದಲ್ಲಿ ಬಂದ ಬೈಕ್ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ರಿಕ್ಷಾ ಪಲ್ಟಿಯಾಗಿದೆ. ಹಾಗೂ ಬೈಕ್ ಸವಾರ ಪರ್ಲಿಯಾ ನಿವಾಸಿ ಶರೀಪ್ ಎಂಬವರು ಬೈಕಿನಿಂದ ಬಿದ್ದು ಅಲ್ಪಸ್ವಲ್ಪ ಗಾಯಗೊಂಡಿದ್ದು,ಇವರನ್ನು ಖಾಸಗಿ ಆಸ್ಪತ್ರೆ ಗೆ ದಾಖಲು ಮಾಡಲಾಗಿದೆ.
ಕೆ.ಎಸ್.ಆರ್.ಟಿ.ಸಿ ಮುಂಭಾಗದಲ್ಲಿ ಮೆಲ್ಕಾರ್ ಟ್ರಾಫಿಕ್ ಠಾಣಾ ಪೋಲೀಸರು ವಾಹನಗಳ ತಪಾಸಣೆ ನಡೆಸುತ್ತಿದ್ದರು. ಈ ಹಿನ್ನಲೆ ಪೋಲೀಸರಿಂದ ತಪ್ಪಿಸಿ ಹೋಗುವ ಉದ್ದೇಶದಿಂದ ಅತಿಯಾದ ಚಾಲನೆಗೆ ಶರೀಫ್ ಎಂಬವರು ಮುಂದಾಗಿದ್ದರು ಎಂದು ಪೊಲೀಸರು ಆರೋಪಿಸಿದ್ದಾರೆ. ಆದರೆ ಸಾರ್ವಜನಿಕರ ದೂರಿನ ಪ್ರಕಾರ ಪೊಲೀಸರು ವಾಹನ ತಪಾಸಣೆ ನಡೆಸುವುದರಿಂದ ಅಪಘಾತ ನಡೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.