ಮಂಗಳೂರು,ಮೇ12(DaijiworldNews/AZM):ಕೊಲೆಯಾದ ರೂಪದಲ್ಲಿ ಮಹಿಳೆಯೋರ್ವರ ರುಂಡ ಹಾಗೂ ದೇಹದ ಭಾಗಗಳು ಪತ್ತೆಯಾಗಿರುವ ಘಟನೆ ಮಂಗಳೂರಿನ ಕೆಪಿಟಿ ಬಳಿ ಇಂದು ನಡೆದಿದೆ.
ಕೆಪಿಟಿ ಬಳಿಯ ಅಂಗಡಿಯೊಂದರಲ್ಲ್ಲಿ ಇಂದು ಹೆಲ್ಮೆಟ್ ಒಳಗಡೆ ಮಹಿಳೆಯ ರುಂಡ ಪತ್ತೆಯಾಗಿದೆ. ಹಾಗೂ ಗೋಣಿ ಚೀಲದಲ್ಲಿ ಮೃತದೇಹ ಪತ್ತೆಯಾಗಿದೆ. ದ್ವಿಚಕ್ರ ವಾಹನದಲ್ಲಿ ಬಂದ ವ್ಯಕ್ತಿಯೋರ್ವ ಮೃತದೇಹವನ್ನು ಇರಿಸಿ ಪರಾರಿಯಾಗಿದ್ದಾನೆ ಎಂದು ಶಂಕಿಸಲಾಗಿದೆ.
ಅಂಗಡಿ ಮಾಲಿಕರು ಬಂದು ಪರಿಶೀಲಿಸಿದ ವೇಳೆ ಕೃತ್ಯ ಬೆಳಕಿಗೆ ಬಂದಿದೆ. ತಕ್ಷಣ ಈ ಕುರಿತು ಕದ್ರಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕದ್ರಿ ಠಾಣೆಯಲ್ಲಿ ಕೇಸು ದಾಖಲಾಗಿದ್ದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಪೊಲೀಸರ ತನಿಖೆಯಿಂದಷ್ಟೇ ಹೆಚ್ಚಿನ ಮಾಹಿತಿ ತಿಳಿದುಬರಬೇಕಾಗಿದೆ.